ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬರಿಮಾರು ಗ್ರಾಮದ ಕಡೆಕ್ಕಾನಗುತ್ತು ಪ್ರಸನ್ನ ಕಾಮತ್ ಮನೆ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳ ಮಾಧವ ಮಾವೆ, ಜಿಲ್ಲಾ ಹಿಂದು ಧಾರ್ಮಿಕ ಪರಿಷತ್ನ ಸದಸ್ಯರಾದ ಜಗನ್ನಾಥ ಚೌಟ ಬದಿಗುಡ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ, ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಣಿ ಡಿ ಪೂಜಾರಿ, ವಲಯ ಅಧ್ಯಕ್ಷರಾದ ಕುಶಲ ಎಂ ಪೆರಾಜೆ, ಶ್ರೀಧರ್ ರೈ, ಅಶೋಕ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಉಪಾಧ್ಯಕ್ಷರಾದ ಮಧುಸೂಧನ್ ಶೆಣೈ ಕಳ್ಳಿಗೆ, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.