ಜಿಲ್ಲಾ ಸುದ್ದಿ

ನಾಲ್ಕು ತಾಲೂಕುಗಳಿಗೆ ನಾಲ್ಕು ಆಂಬುಲೆನ್ಸ್ ಲೋಕಾರ್ಪಣೆ

ಎಂಆರ್ ಪಿಎಲ್ ಸಂಸ್ಥೆಯ ಸಿಎಸ್ ಆರ್ ಅನುದಾನದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆಗಳಿಗೆ ನೀಡಿರುವ ನಾಲ್ಕು  ಅಂಬ್ಯುಲೆನ್ಸ್ ಲೋಕಾರ್ಪಣೆ  ಕಾರ್ಯಕ್ರಮ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ  ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಶ್ರೀ ರಾಜೇಶ್ ನಾಯ್ಕ್  ಉಳಿಪ್ಪಾಡಿ,ಸಂಸದ  ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಶ್ರೀನಿವಾಸ ಪೂಜಾರಿ, ರಾಜ್ಯದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದ.ಕ.ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ ಎಂದರು.

ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ಮಾತನಾಡಿ, ತನ್ನ ಸಾಮಾಜಿಕ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿರುವ ಎಂಆರ್‌ಪಿಎಲ್ ಸಂಸ್ಥೆಯು ಕಳೆದ ವರ್ಷ 40 ಕೋ.ರೂ.ಗಳ ಸಿಎಸ್‌ಆರ್ ಅನುದಾನ ನೀಡಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಆಸ್ಪತ್ರೆಗೆ ತಜ್ಞ ವೈದ್ಯರು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಎಂಆರ್‌ಪಿಎಲ್ ಸಂಸ್ಥೆಗೆ ಮನವಿ ಮಾಡಿದರು.

ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್, ರವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ತಾಪಂ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು. ಎಂಆರ್‌ಪಿಎಲ್ ಸಂಸ್ಥೆಯ ಜಿಜಿಎಂ(ಎಚ್‌ಆರ್) ಬಿ.ಎಚ್.ವಿ.ಪ್ರಸಾದ್, ಜನರಲ್ ಮ್ಯಾನೇಜರ್(ಸಿಎಸ್‌ಆರ್) ಸುಬ್ರಾಯ ಭಟ್, ಸೀನಿಯರ್ ಮ್ಯಾನೇಜರ್(ಸಿಎಸ್‌ಆರ್) ರಾಮಸುಬ್ರಹ್ಮಣ್ಯ, ಪ್ರಮುಖರಾದ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಸುಲೋಚನಾ ಭಟ್, ದೇವದಾಸ್ ಶೆಟ್ಟಿ ಬಂಟ್ವಾಳ ಟಿಎಚ್‌ಒ ಡಾ. ದೀಪಾ ಪ್ರಭು, ಬೆಳ್ತಂಗಡಿ ಟಿಎಚ್‌ಒ ಡಾ.ಕಲಾಮಧು, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸದಾಶಿವ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸ್ವಾಗತಿಸಿ, ವಂದಿಸಿದರು.

www.bantwalnews.com Editor: Harish Mambady For Advertisements Contact: 9448548127

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ