ಮಂಗಳವಾರ ರಾತ್ರಿ ಸುರಿದ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿ ಸಂಭವಿಸಿದೆ. ಬಾಳ್ತಿಲ ಗ್ರಾಮದ ಬಾಳ್ತಿಲ ಗ್ರಾಮದ ಗೋಪಿ ಎಂಬವರ ಮನೆ ತೀವ್ರ ಹಾನಿಯಾಗಿದೆ. ಅದೇ ಗ್ರಾಮದ ಚಂದಪ್ಪ ಪೂಜಾರಿ ಅವರ ಕಚ್ಚಾ ಮನೆಗೆ ಹಾನಿಯಾಗಿದ್ದರೆ, ಕುರಿಯಾಳ ಗ್ರಾಮದ ಚಂದ್ರಯ್ಯ ಆಚಾರಿ ಅವರ ಮನೆ ಭಾಗಶಃ ಹಾನಿಗೊಳಗಾಗಿದೆ. ವಿಟ್ಲ ಕಸಬಾ ಗ್ರಾಮದ ಗುಲಾಬಿ ಮನೆ ಭಾಗಶಃ ಹಾನಿಗೊಳಗಾಗಿದೆ. ಸಜೀಪಮುನ್ನೂರು ಗ್ರಾಮದ ರಾಜೇಂದ್ರಕುಮಾರ್ ಕಚ್ಚಾ ಮನೆಗೆ ಹಾನಿಯಾಗಿದೆ.
ಬಾಳ್ತಿಲ ಗ್ರಾಮದ ಕುರ್ಮಾನ್ ಗೋಪಿ ಪೂಜಾರಿ ಅವರ ಮನೆ ಸಂಪೂರ್ಣ ಕುಸಿದು ಬಿದ್ದು ಹೋಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ, ಅರ್.ಎಸ್.ಎಸ್.ಪ್ರಮುಖ ಡಾ. ಪ್ರಭಾಕರ ಭಟ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತಿತರರು ಭೇಟಿ ನೀಡಿದರು. ಸಿಡಿಲಿಗೆ ಕುರಿಯಾಳ ಗ್ರಾಮದ ಪುಲ್ಲಾಜೆ ಎಂಬಲ್ಲಿ ಚಂದ್ರಯ್ಯ ಆಚಾರ್ಯ ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮಕರಣಿಕ ಅಮೃತಾಂಶು ಕೆ.ಎಸ್., ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.