ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಶಿಕ್ಷಕ ಧನರಾಜ್, ೮ ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಶ್ರೀಮಂತ ಭಾಷೆ ನಮ್ಮದು. ನ.೧ರಂದು ರಾಜ್ಯೋತ್ಸವ ಆಚರಣೆಯ ಜೊತೆಗೆ ಕನ್ನಡ ನಂಬರ್ ೧ ಆಗುವತ್ತ ಚಿಂತಿಸಬೇಕು. ಒಂದು ದಿನದ ಆಚರಣೆಯಾಗುವ ಬದಲು ನಿತ್ಯದ ಉತ್ಸವ ಆಗಬೇಕು ಎಂದರು.
ಬಂಟ್ಟಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆ ಮಾತೃಭಾಷೆ ಬೇರೆಯಾಗಿದ್ದರೂ ಕನ್ನಡವನ್ನು ಉಳಿಸಿ ಬೆಳೆಸುವಳಗಳಿ ದೊಡ್ಡ ಪಾತ್ರ ವಹಿಸಿದೆ ಎಂದರು.
ರಾಷ್ಟ್ರ ಧ್ವಜಾರೋಹಣಗೈದ ತಹಶೀಲ್ದಾರ್ ರಶ್ಮಿ ಎಸ್.ಆರ್. ರಾಜ್ಯೋತ್ಸವದ ಸಂದೇಶ ನೀಡುತ್ತಾ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉತ್ತಮ ಹುದ್ದೆ ಸಿಗುತ್ತದೆ ಎಂಬ ತಪ್ಪು ಕಲ್ಪನೆಯನ್ನು ಬದಿಗಿಟ್ಟು ಕನ್ನಡ ಸಾಹಿತ್ಯವನ್ನು ನಮ್ಮ ಮಕ್ಕಳಿಗೆ ಕಲಿಸಿ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು. ಈ ಹಂತದಲ್ಲಿ ಬಂಟ್ವಾಳದ ಪಂಜೆ ಮಂಗೇಶರಾಯರು, ಏರ್ಯ ಲಕ್ಷ್ಮೀನಾರಾಯಣ ಆಳ್ವರ ಕೊಡುಗೆಯನ್ನು ನೆನಪಿಸಿಕೊಳ್ಳಬೇಕು ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ತಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ, ಶಿರಸ್ತೇದಾರ್ ರಾಜೇಶ್ ನಾಯ್ಕ್, ಪಾಣೆಮಂಗಳೂರು ಹೋಬಳಿ ನಾಡಕಚೇರಿ ಉಪತಹಶೀಲ್ದಾರ್ ರೂಪೇಶ್ ಕುಮಾರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಉಪತಹಶೀಲ್ದಾರ್ ಶ್ರೀಧರ್ ವಂದಿಸಿದರು. ಕಂದಾಯ ನಿರೀಕ್ಷಕ ರಾಮ ಕಾರ್ಯಕ್ರಮ ನಿರೂಪಿಸಿದರು.
www.bantwalnews.com Editor: Harish Mambady For Advertisements Contact: 9448548127
Be the first to comment on "ಒಂದು ದಿನದ ಆಚರಣೆಗಷ್ಟೇ ರಾಜ್ಯೋತ್ಸವ ಸೀಮಿತವಾಗದಿರಲಿ"