ಕಸಾಪ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು, ಸಿದ್ಧಕಟ್ಟೆ ಹೈಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಜ್ಯೋತ್ಸವ ಶುಕ್ರವಾರ ನಡೆಯಿತು.
ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಆಶಯ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಅಧ್ಯಕ್ಷ ಮನೋರಂಜನ್ ಕರೈ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಿದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಪಾದರಕ್ಷೆ ಸಾಕ್ಸ್ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಲಯನ್ಸ್‌ಕ್ಲಬ್‌ನ ಹಿರಿಯ ಡಾ.ಗೋಪಾಲ ಆಚಾರ್, ಸರಕಾರಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಎಸ್.ಪಿ ಶ್ರೀಧರ್, ಸುರೇಶ್ ಕುಲಾಲ್, ಮಾಧವ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೋಣಯ್ಯ ಶೆಟ್ಟಿಗಾರ್, ಸಂಸ್ಥೆಯ ವೈಸ್ ಪ್ರಿನ್ಸಿಪಾಲ್ ರಮಾನಂದ ನೂಜಿಪ್ಪಾಡಿ, ಅರ್ಕಕೀರ್ತಿ ಇಂದ್ರ, ಎ.ಪಿ.ಎಂ.ಸಿ ಸದಸ್ಯ ರತ್ನಕುಮಾರ್ ಚೌಟ ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ ಪಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಸ್ಮಿತಾ ಎಂ.ಎಚ್ ವಂದಿಸಿದರು.
Be the first to comment on "ಸಿದ್ಧಕಟ್ಟೆ ಹೈಸ್ಕೂಲಿನಲ್ಲಿ ಕರ್ನಾಟಕ ರಾಜ್ಯೋತ್ಸವ"