ಬಂಟ್ವಾಳ

ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ


ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಸೈಕಲ್‌ನ್ನು ವಿತರಿಸಲಾಯಿತು.
ಬಂಟ್ವಾಳ ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ಅವರು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ, ಸರಕಾರಗಳು ನೀಡುವಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಜೊತೆ ಸುಶಿಕ್ಷಿತರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.

ಶಿಕ್ಷಣ ಪಡೆದ ನಂತರ ವಿದ್ಯಾರ್ಥಿಗಳು, ಪೋಷಕರ ನಿರಂತರ ಶಾಲೆಯ ಸಂಪರ್ಕವನ್ನು ಇಟ್ಟುಕೊಳ್ಳುವುದರ ಮುಖಾಂತರ ಶಾಲೆಯ ಎಲ್ಲ ರೀತಿಯ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಜಾಹೀರಾತು

ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ೮ನೇ ತರಗತಿಯ ೧೨೫ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಸೈಕಲ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ವೇದಮೂರ್ತಿ ಎಂ. ಜನಾರ್ದನ್ ಭಟ್, ಮುಖ್ಯೋಪಾದ್ಯಾಯ ಭೋಜ, ಸಹಶಿಕ್ಷಕರಾದ ಅಜಿತ್ ಕುಮಾರ್, ಸುಧಾಕರ್ ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ