ಗ್ರಾಮೀಣ ಮಟ್ಟದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು ನಡೆಯುವುದು ಔಚಿತ್ಯಪೂರ್ಣವಾಗಿದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಆರಂಭಗೊಂಡ ಎರಡು ದಿನಗಳ ದ.ಕ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಪ್ರತಿಭಾ ಕಲರವ ಉದ್ಘಾಟಿಸಿ ಮಾತನಾಡಿದರು.
ಇದು ಗ್ರಾಮೀಣ ಪ್ರದೇಶದವರಿಗೆ ಗೌರವ ನೀಡಿದಂತೆ ಎಂದ ಶಾಸಕ, ಇಂತಹಾ ಸ್ಪರ್ಧಾ ಕಾರ್ಯಕ್ರಮಗಳು ಮಕ್ಕಳಲ್ಲಿ ಹುರುಪು ಹೆಚ್ಚಿಸಲು ಕಾರಣವಾಗಲಿ ಎಂದರು. ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಪ್ರತಿಭಾಕಾರಂಜಿ ಮಕ್ಕಳ ಸಾಂಸ್ಕೃತಿಕ ಹಬ್ಬವಾಗಿದ್ದು, ಉತ್ಸಾಹದ ಪಾಲ್ಗೊಳ್ಳುವಿಕೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.
ದ.ಕ.ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ,ಪ್ರತಿಭೆಗಳ ಅನಾವರಣದ ದೊಡ್ಡ ಕೆಲಸ ಪ್ರತಿಭಾ ಕಾರಂಜಿಯಿಂದ ನಡೆಯುತ್ತಿದೆ ಎಂದರು.
ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಮಮತಾ ಗಟ್ಟಿ, ಕಮಲಾಕ್ಷಿ ಪೂಜಾರಿ, ಎಂ.ಎಸ್.ಮಹಮ್ಮದ್, ತಾಲೂಕು ಪಂಚಾಯತ್ ಸ್ಥಾಯಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾ.ಪಂ. ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ, ಮಾಣಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ನಾಯ್ಕ್, ಕಾರ್ಯದರ್ಶಿ ನಾರಾಯಣ ಕೊಂಬಿಲ, ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಗ್ರೇಸ್ ಪಿ ಸಲ್ದಾನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಜಿಲ್ಲಾ ನೋಡಲ್ ಅಧಿಕಾರಿ ಶೋಭಾ ಎನ್, ತಾಲೂಕು ನೋಡಲ್ ಅಧಿಕಾರಿ ಸುಶೀಲಾ, ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್ , ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಮಕೃಷ್ಣ ಶೀರೂರು, ವಿವಿಧ ಶಿಕ್ಷಕ-ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳಾದ ಚೆನ್ನಕೇಶವ, ಶಿವಪ್ರಸಾದ್ ಶೆಟ್ಟಿ, ಗಣೇಶ್, ಜತ್ತಪ್ಪ ಗೌಡ, ಜೋಯಲ್ ಲೋಬೋ, ರಮಾನಂದ, ಮುರಳೀ ಕೃಷ್ಣ, ಚಿನ್ನಪ್ಪ ಜಾಲ್ಸೂರು, ಜಯರಾಮ, ಸುಬ್ರಾಯ ಕಾರಂತ್ ಉಪಸ್ಥಿತರಿದ್ದರು.ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ ಸ್ವಾಗತಿಸಿದರು.ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ವಂದಿಸಿದರು. ಶಿಕ್ಷಕಿಯರಾದ ಸುಧಾ, ಜಯಶ್ರೀ ಆಚಾರ್ಯ, ರಶ್ಮೀ ಫರ್ನಾಂಡೀಸ್, ಶೋಭಾ ಕಾರ್ಯಕ್ರಮ ನಿರ್ವಹಿಸಿದರು.
70ಕ್ಕೂ ಅಧಿಕ ಸ್ಪರ್ಧೆ:ಎರಡು ದಿನಗಳ ಕಾಲ ನಡೆಯಲಿರುವ ಕಲೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ 70ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 1200ಕ್ಕೂ ಸ್ಪರ್ಧಿಗಳು ಸೇರಿದಂತೆ ಸುಮಾರು 2000ಕ್ಕೂ ವಿದ್ಯಾರ್ಥಿಗಳು ಪ್ರತಿಭಾ ಕಲರವದಲ್ಲಿ ಭಾಗವಹಿಸುತ್ತಿದ್ದಾರೆ.