ಉಚಿತ ಬೈಸಿಕಲ್ ಮತ್ತು ಶೂ ವಿತರಣಾ ಸಮಾರಂಭವು ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ನಡೆಯಿತು.
ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಎಂ. ಎಸ್. ಮಹಮ್ಮದ್‌ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದೆನ್ನುವ ಸರಕಾರದ ಕಾಳಜಿಯನ್ನು ಸದುಪಯೋಗಪಡಿಸಿಕೊಂಡು ಖಾಸಗಿ ಶಾಲೆಗಳ ಮಕ್ಕಳ ಜತೆ ಸರಿಸಾಟಿಯಾಗಿ ವಿದ್ಯಾಭ್ಯಾಸವನ್ನು ಪಡೆಯಬೇಕು ಎಂದರು.
ಉಚಿತ ಶೂವನ್ನು ವಿತರಿಸಿ ಮಾತನಾಢಿದ ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು ಸರಕಾರದ ಯೋಜನೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೇಳವಣಿಗಗೆ ಕಾರಣವಾಗಬೇಕು ಎಂದರು.
ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಶೈಕ್ಷಣಿಕ ಪ್ರಗತಿಯ ಜೊತೆಗೆ ಜೀವನ ಕೌಶಲ್ಯದ ವಿದ್ಯೆಯಲ್ಲಿಯೂ ಪಾರಂಗತರಾದಾಗ ಬದುಕಿನ ಪಥದಲ್ಲಿ ಯಶಸ್ವಿಯಾಗಿ ಗುರಿ ಕ್ರಮಿಸಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಮಂಚಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಐರಿನ್ ಡಿ ಸೋಜ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಅಶೋಕ ಶಿಂಗಾರಕೋಡಿ ಮತ್ತು ಲೋಕೆಶ್ ಭಂಡಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ವಿ.ಶ್ರೀರಾಮಮೂರ್ತಿ ಸ್ವಾಗತಿಸಿದರು, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಪ್ರವೀಣ್ ಕೊಟ್ಟಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಲಾಶಿಕ್ಷಕ ವಿಶಾಂತ್ ಮಾರ್ಕ್ ಡಿ ಸೋಜ ವಂದಿಸಿ, ದೈಹಿಕ ಶಿಕ್ಷಕ ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.