ಕಲ್ಲಡ್ಕ

ಮಾಣಿ ಬಹುಗ್ರಾಮ ಯೋಜನೆ ಸ್ಥಳಕ್ಕೆ ಶಾಸಕ ಭೇಟಿ

ಆರು ಗ್ರಾಮಗಳಿಗೆ ಕುಡಿಯುವ ನೀರೊದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನ.೮ರಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಹೇಳಿದ್ಧಾರೆ.

ಗಡಿಯಾರದಲ್ಲಿರುವ ನೀರು ಸಂಗ್ರಹಣಾ ಮತ್ತು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಯೋಜನೆ ಪ್ರಗತಿ ಹಂತದಲ್ಲಿ ೨.೭೨ ಕೋಟಿ ರೂ ಕೊರತೆ ಅನುದಾನವನ್ನು ಸಂಬಂಧಪಟ್ಟ ಸಚಿವರ ಬಳಿ ಮಾತುಕತೆ ನಡೆಸಿ ಮಂಜೂರು ಮಾಡಿಸಲಾಗಿದೆ ಎಂದ ಅವರು, ಹೆಚ್ಚುವರಿ ಜನವಸತಿ ಇರುವ ಗ್ರಾಮಗಳನ್ನೂ ಸೇರಿಸಲಾಗಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಂಟ್ವಾಳ ಉಪವಿಭಾಗ ಸಹಾಯಕ ಕಾ.ನಿ. ಇಂಜಿನಿಯರ್ ಮಹೇಶ್, ಜ್ಯೂ.ಇಂಜಿನಿಯರ್ ಜಗದೀಶ್, ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ಮಾಣಿ ಗ್ರಾ.ಪಂ.ಸದಸ್ಯ ನಾರಾಯಣ ಶೆಟ್ಟಿ, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾ, ಕಡೇಶ್ವಾಲ್ಯ ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲ ಶೆಟ್ಟಿ,  ಗಣ್ಯರಾದ ವಿಧ್ಯಾದರ ರೈ ಕಡೇಶ್ವಾಲ್ಯ, ಬಿ. ದೇವದಾಸ ಶೆಟ್ಟಿ, ಗಣೇಶ್ ರೈ ಮಾಣಿ, ಪುಷ್ಪರಾಜ ಶೆಟ್ಟಿ, ಹಿರಿಯ ಸಹಕಾರಿ ನಾರಾಯಣ ಸಪಲ್ಯ ಮತ್ತು ಪ್ರಮುಖರು ಉಪಸ್ಥಿತರಿದ್ದರು.

www.bantwalnews.com Editor: Harish Mambady For Advertisements Contact: 9448548127

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ