ಬಂಟ್ವಾಳ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ಮಲ್ಲಿಕಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಇದುವರೆಗೆ ಅಧ್ಯಕ್ಷೆಯಾಗಿದ್ದ ಧನಲಕ್ಷ್ಮೀ ಬಂಗೇರ ಅವಧಿ ಮುಗಿದ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಬುಧವಾರ ನಡೆದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು. ಈ ಸಂದರ್ಭ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿ ಮಲ್ಲಿಕಾ ಹೆಸರನ್ನು ಸೂಚಿಸಿದರೆ, ಮತ್ತೋರ್ವ ಸದಸ್ಯ ಆದಂ ಕುಂಞ ಅನುಮೋದಿಸಿದರು. ಆಯ್ಕೆಯನ್ನು ಇಒ ರಾಜಣ್ಣ ಪ್ರಕಟಿಸಿದರು. ಈ ಸಂದರ್ಭ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
www.bantwalnews.com Editor: Harish Mambady For Advertisements Contact: 9448548127