
ರಾಜ್ಯ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕಾಧ್ಯಕ್ಷರಾಗಿ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್ ಆಯ್ಕೆಯಾಗಿದ್ದಾರೆ.
ಬಂಟ್ವಾಳದಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಸಮಿತಿ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಎಂ.ರಾಮು ಚೆನ್ನಪಟ್ಟಣ,ಜಿ.ಟಿ.ರಾಮಸ್ವಾಮಿ, ಲೋಕೆಶ್ ರಾಜೇ ಅರಸ್,ಮೈಸೂರು ಜಿಲ್ಲಾಧ್ಯಕ್ಷರಾದ ಹೊಸೂರ್ ಕುಮಾರ್, ಹಾಸನ ಜಿಲ್ಲಾಧ್ಯಕ್ಷರಾದ ರಘು ಹಿರಿಸಾವೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ, ತಾಲೂಕು,ವಲಯ ಹಾಗೂ ಗ್ರಾಮ ಘಟಕಗಳ ಪದಾಧಿಕಾರಿಗಳು ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು
ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಪೆರಾಬೆ, ಉಪಾಧ್ಯಕ್ಷರುಗಳಾಗಿ ಶ್ರೀನಿವಾಸ್ ಗೌಡ ನಿಡಿಂಜಿ, ದಿವಾಕರ ಪೈ ಮಜಿಗುಂಡಿ, ಅಲ್ವೀನ್ ಮಿನೆಜಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಉಪಸ್ಥಿತರಿದ್ದರು.
www.bantwalnews.com Editor: Harish Mambady For Advertisements Contact: 9448548127


Be the first to comment on "ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷರಾಗಿ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್"