ತುಳು ಕತೆ ಹೇಳುವುದು, ಗಾಯನ ಸ್ಪರ್ಧೆ 16ಕ್ಕೆ

ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಳು ಕತೆ ಹೇಳುವುದು ಮತ್ತು ತುಳು ಪದ್ಯ ಹಾಡುವ  ಸ್ಪರ್ಧೆಯನ್ನು ನ.16ರಂದು ಆಯೋಜಿಸಲಾಗಿದೆ.

ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ಉಧ್ಘಾಟಿಸುವರು. ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆ ವಹಿಸುವರು. ತುಳುಕೂಟ ಗೌರವಾಧ್ಯಕ್ಷ ಎ.ಸಿ.ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ  ಜ್ಞಾನೇಶ್ ಪಿ., ಕಲಾವಿದ ಸದಾಶಿವ ಡಿ.ತುಂಬೆ, ಚಲನಚಿತ್ರ ಕಲಾವಿದ ಸುಂದರ ರೈ ಮಂದಾರ ಆತಿಥಿಗಳಾಗಿ ಭಾಗವಹಿಸುವರು.

ಪ್ರತೀ ಸ್ಪರ್ಧೆಗೆ  5 ನಿಮಿಷಗಳ ಅವಕಾಶವಿದೆ. ಪ್ರತೀ ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಎರಡು ಸಾವಿರ ರೂಪಾಯಿ ನಗದು, ದ್ವಿತೀಯ ಒಂದೂವರೆ ಸಾವಿರ ರೂಪಾಯಿ ನಗದು, ತೃತೀಯ ಒಂದು ಸಾವಿರ ರೂಪಾಯಿ ನಗದು, ಪುಸ್ತಕ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ತುಳುಕೂಟದ ಪ್ರಧಾನ ಕಾರ್ಯದರ್ಶಿ ಎಚ್ಕೆ. ನಯನಾಡು ಮತ್ತು ಸ್ಪರ್ಧಾ ಸಮಿತಿ ಸಂಚಾಲಕ ಕೆ.ರಮೇಶ್ ನಾಯಕ್ ರಾಯಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.bantwalnews.com Editor: Harish Mambady For Advertisements Contact: 9448548127

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




  

  

Be the first to comment on "ತುಳು ಕತೆ ಹೇಳುವುದು, ಗಾಯನ ಸ್ಪರ್ಧೆ 16ಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*