ಪ್ರಗತಿಯಲ್ಲಿರುವ ಬಂಟ್ವಾಳ ತಾಲೂಕಿನ ವಿವಿಧ ಕುಡಿಯುವ ನೀರನ್ನು ಗ್ರಾಮೀಣ ಜನರಿಗೆ ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಡಿಕೆಯಂತೆ ಹೆಚ್ಚುವರಿ 45.5 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ವಿಭಾಗ ಸಹಯೋಗದೊಂದಿಗೆ ಮಾಣಿ ಮತ್ತು 51 ಜನವಸತಿಗಳ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಶುಕ್ರವಾರ ಮಧ್ಯಾಹ್ನ ಕಡೇಶಿವಾಲಯದಲ್ಲಿ ಉದ್ಘಾಟಿಸಿದ ಬಳಿಕ ಬಂಟ್ವಾಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಅನುದಾನ ಪ್ರಕಟಿಸಿದರು.
ಆರು ಗ್ರಾಮ ವ್ಯಾಪ್ತಿಯ ಸರ್ವಋತು ಜಲಪೂರಣ 19.18 ಕೋಟಿ ರೂ. ವೆಚ್ಚದ ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಕಡೇಶ್ವಾಲ್ಯ ದೇವಳದ ಸಮೀಪ ನೇತ್ರಾವತಿ ನದಿಯಿಂದ ನೀರೇತ್ತವ ರೇಚಕ ಸ್ಥಾವರದಲ್ಲಿ ಲೋಕಾರ್ಪಣೆಗೊಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿಪಂಜ, ಜಿಪಂ ಸದಸ್ಯರಾದ ಮಂಜುಳಾ ಮಾವೆ,ಕಮಾಲಾಕ್ಷಿ ಕೆ. ಪೂಜಾರಿ, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸದಸ್ಯರಾದ ಗೀತಾಚಂದ್ರಶೇಖರ್, ಆದಂ ಕುಂಞ, ಮಂಜುಳ ಕುಶಲ ಪೆರಾಜೆ, ಮಾಣಿ ಗ್ರಾಪಂ ಅಧ್ಯಕ್ಷೆ ಮಮತಾ ಎಸ್ .ಶೆಟ್ಟಿ, ಪೆರಾಜೆ ಗ್ರಾಪಂ ಅಧ್ಯಕ್ಷೆ ಪುಪ್ಪ, ಕಡೇಶ್ವಾಲ್ಯಗ್ರಾಪಂ ಅಧ್ಯಕ್ಷೆ ಶ್ಯಾಮಲ ಶೆಟ್ಟಿ, ನೆಟ್ಲಮುಡ್ನೂರು ಗ್ರಾಪಂ ಅಧ್ಯಕ್ಷೆ ವಿಜಯ,ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಜ್ಯ ಬಾಲಭವನ ಸೊಸೈಟಿಯ ಮಾಜಿ ಅಧ್ಯಕ್ಷೆ ಸುಲೋಚನಾ ಜಿಕೆ ಭಟ್ , ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಗಣೇಶ್ ರೈ ಮಾಣಿ, ಪುಪ್ಪರಾಜ್ ಚೌಟ, ಎಪಿಎಂಸಿ ಮಾಜಿ ಅಧ್ಯಕ್ಷ ರೋನಾಲ್ಡ್ ಡಿಸೋಜ,ಆನಂದ ಎ. ಶಂಭೂರು ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಸೆಲ್ವಮಣಿ, ತಹಸೀಲ್ದಾರ್ ರಶ್ಮಿ ಎಸ್.ಆರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಂಟ್ವಾಳ ಉಪವಿಭಾಗ ಸಹಾಯಕ ಕಾ.ನಿ. ಇಂಜಿನಿಯರ್ ಮಹೇಶ್, ದ.ಕ.ಜಿ.ಪಂ.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರಾದ ಜಿ.ನರೇಂದ್ರ ಬಾಬು, ಪಂಚಾಯತ್ ರಾಜ್ ಎಇಇ ತಾರಾನಾಥ ಸಾಲಿಯಾನ್, ಸಹಾಯಕ ಎಂಜಿನಿಯರುಗಳಾದ ಕೆ.ಎನ್.ಅಜಿತ್, ಎನ್.ಪದ್ಮರಾಜ ಗೌಡ, ಕಿರಿಯ ಎಂಜಿನಿಯರುಗಳಾದ ಕೃಷ್ಣ ಮಾನಪ್ಪ, ಜಗದೀಶ್ಚಂದ್ರ, ರವಿಚಂದ್ರ ಮೊದಲಾದವರಿದ್ದರು.
www.bantwalnews.com Editor: Harish Mambady For Advertisements Contact: 9448548127