ಪಂಚಾಯತ್ ರಾಜ್ ಬಲವರ್ಧನೆಗೆ ಕಾಯ್ದೆ ತಿದ್ದುಪಡಿ: ಸಚಿವ ಈಶ್ವರಪ್ಪ

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಗ್ರಾಪಂಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ವೈಖರಿಯನ್ನು ರಾಜ್ಯಕ್ಕೆ ಮಾದರಿಯಾಗಿಸಿ ಗ್ರಾಪಂಗಳನ್ನು ಸಕ್ರಿಯವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಆಶ್ರಯದಲ್ಲಿ ಶುಕ್ರವಾರ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಡಿಸಿದ ಪ್ರಮುಖ ಬೇಡಿಕೆಯಾದ ಸಿಬ್ಬಂದಿ ಕೊರತೆಯನ್ನು ನೀಗಿಸುವುದಾಗಿ ತಿಳಿಸಿದರು.

ಈಶ್ವರಪ್ಪ ಅವರ ಭಾಷಣದ ಇತರ ಪ್ರಮುಖ ಅಂಶಗಳು ಇವು.

  • ಪ್ರತಿ ಗ್ರಾಪಂಗಳಲ್ಲಿ ಸ್ಮಶಾನಕ್ಕೆ ಭೂಮಿ ಕಾದಿರಿಸುವಿಕೆ.
  • ಘನ, ದ್ರವ ತ್ಯಾಜ್ಯ ವಿಲೇವಾರಿಗೆ ಕ್ಲಸ್ಟರ್ ಯೋಜನೆ ರೂಪಿಸುವ ಮೂಲಕ ಶುದ್ಧೀಕರಣ ಘಟಕ ನಿರ್ಮಾಣ
  • ರಾಜ್ಯದ 6021 ಗ್ರಾಮ ಪಂಚಾಯಿತಿಗಳಲ್ಲಿ ಸೌರಶಕ್ತಿ ಮೂಲಕ ವಿದ್ಯುತ್ ಒದಗಿಸಲು ಯೋಜನೆ
  • 1500 ಕೋಟಿ ರೂಪಾಯಿ ರಾಜ್ಯಾದ್ಯಂತ ಇರುವ ಗ್ರಾಮೀಣ ರಸ್ತೆಗಳ, ಮೂಲಸೌಕರ್ಯಗಳ ಅಭಿವೃದ್ಧಿಗೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ವಿವರಿಸಿ, ಶೇ.೫೦ಕ್ಕಿಂತಲೂ ಅಧಿಕ ಸಿಬ್ಬಂದಿ ಕೊರತೆಗಳ ಕುರಿತು ಗಮನ ಸೆಳೆದರು. ಸಿಬ್ಬಂದಿಗೆ ಉದ್ಯೋಗ ಭದ್ರತೆ ಗ್ರಂಥಪಾಲಕರಿಗೆ ಸೂಕ್ತ ವೇತನ, ಗ್ರಾಮ ಪಂಚಾಯಿತಿಗಳಲ್ಲಿ ಕೇರಳ ಮಾದರಿಯಲ್ಲಿ ಜನನ, ಮರಣ, ವಿವಾಹ ನೋಂದಣಿ ವ್ಯವಸ್ಥೆ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು, ಸರಪಾಡಿ, ನರಿಕೊಂಬು ಯೋಜನೆಗಳಿಗೆ ಸುಮಾರು ೮.೪ ಕೋಟಿ ರೂ ಅನುದಾನ ಬಿಡುಗಡೆ ಆಗಿರುವುದಾಗಿ ತಿಳಿಸಿದರು.

ಕೊಳ್ನಾಡು ಗ್ರಾಪಂ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮತ್ತು ವಿಟ್ಲಪಡ್ನೂರು ಗ್ರಾಪಂ ಅಧ್ಯಕ್ಷ ನವೀನ್ ಶೆಟ್ಟಿ ತಮ್ಮ ಗ್ರಾಮಗಳ ಸಾಧನೆಯ ಕುರಿತು ಬೆಳಕು ಚೆಲ್ಲಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ಉಪಾಧ್ಯಕ್ಷೆ ಕಸ್ತೂರಿ ಪಂಜ,  ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ  ಚಂದ್ರಹಾಸ ಕರ್ಕೇರ,  ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕೃಷಿ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಯು.ಪಿ.ಇಬ್ರಾಹಿಂ, ಬಂಟ್ವಾಳ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪುತ್ತೂರು ತಾ.ಪಂ.ಅಧ್ಯಕ್ಷ. ರಾಧಾಕೃಷ್ಣ ಬೋರ್ಕರ್,  ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸೆಲ್ವಮಣಿ,  ಸಚಿವರ ವಿಶೇಷ ಅಧಿಕಾರಿ ಜಯರಾಮ, ತಹಸೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಯೋಜನಾ ನಿರ್ದೇಶಕ ಮಧುಕುಮಾರ್  ಸ್ವಾಗತಿಸಿದರು. ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

www.bantwalnews.com Editor: Harish Mambady For Advertisements Contact: 9448548127

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ 

  

 

Be the first to comment on "ಪಂಚಾಯತ್ ರಾಜ್ ಬಲವರ್ಧನೆಗೆ ಕಾಯ್ದೆ ತಿದ್ದುಪಡಿ: ಸಚಿವ ಈಶ್ವರಪ್ಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*