ಸಿದ್ಧಕಟ್ಟೆಯ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ವತಿಯಿಂದ ಭಾನುವಾರ ಸಂಜೆ ಯಕ್ಷಗಾನ ತಾಳಮದ್ದಳೆ, ಸಂಸ್ಮರಣೆ, ಸನ್ಮಾನ ಕಾರ್ಯಕ್ರಮಗಳು ನಡೆದವು.
ಕೀರ್ತಿಶೇಷ ಚೆನ್ನಪ್ಪ ಶೆಟ್ಟಿ ಮತ್ತು ವಿಶ್ವನಾಥ ಶೆಟ್ಟಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಪ್ರಭಾಚಂದ್ರ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣಪ್ರಸಾದ ಆಚಾರ್ಯ ಶುಭ ಹಾರೈಸಿದರು.ಡಾ. ಯೋಗೀಶ ಕೈರೋಡಿ ಕಾರ್ಯಕ್ರಮದ ಆಶಯಗಳನ್ನು ತಿಳಿಸಿ, ನಿರ್ವಹಿಸಿದರು.
ಬಳಿಕ ಕೀರ್ತಿಶೇಷರಾದ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ, ಸಂಜೀವ ಶೆಟ್ಟಿ ಪೊಡುಂಬ, ದೇವಪ್ಪ ಶೆಟ್ಟಿ ಮಾವಂತೂರು ಮತ್ತು ರಮೇಶ್ ಭಟ್ ಮಾದೇರಿ ಅವರ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.
ಎಣ್ಮಾಜೆ ವಿನಯಚಂದ್ರ ಜೈನ್ ಸಂಸ್ಮರಣಾ ಭಾಷಣ ಮಾಡಿದರು. ಈ ಸಂದರ್ಭ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಹಿ.ಪ್ರಾ.ಶಾಲೆ ನಿವೃತ್ತ ಮುಖ್ಯೋಪಾಧ್ಯಾಯ, ಯಕ್ಷಗಾನ ಹಿರಿಯ ಅರ್ಥಧಾರಿ ಚಂದ್ರಶೇಖರ ರಾವ್ ಮಂಚಿ ಮತ್ತು ಸಿದ್ಧಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಸೇವಾವೃಂದದ ಅಧ್ಯಕ್ಷ ಕಾಂತಣ್ಣ ಶೆಟ್ಟಿ ಹೊಂಗಾರಹಿತ್ಲು ಅವರನ್ನು ಸನ್ಮಾನಿಸಲಾಯಿತು.
ಅತಿಥಿಗಳಾಗಿ ಮೂಡುಬಿದಿರೆಯ ಉದ್ಯಮಿ ಶ್ರೀಪತಿ ಭಟ್, ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ, ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಗೋಪಾಲ ಬಂಗೇರ, ಉದ್ಯಮಿ ದುರ್ಗಾದಾಸ್ ಶೆಟ್ಟಿ ಮಾವಂತೂರು, ಯಕ್ಷಾಂತರಂಗ ಸಿದ್ಧಕಟ್ಟೆ ಅಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ಉದ್ಯಮಿ ಕಿರಣ್ ಕುಮಾರ್ ಮಂಜಿಲ ಮತ್ತು ಪ್ರದೀಪ್ ಭಟ್ ಮಾದೇರಿ ವೇದಿಕೆಯಲ್ಲಿದ್ದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಪ್ರಮುಖರಾದ ಬೇಬಿ ಕುಂದರ್, ವಾಸು ಶೆಟ್ಟಿ ಕುತ್ಲೋಡಿ, ಡಾ. ಸುದೀಪ್ ಕುಮಾರ್, ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಮತ್ತಿತರರು ಉಪಸ್ಥಿತರಿದ್ದರು. ನ್ಯಾಯವಾದಿ ಸುರೇಶ್ ಶೆಟ್ಟಿ ಸನ್ಮಾನಿತರ ಪರಿಚಯ ಮಾಡಿದರು. ಗಣೇಶ್ ಶೆಟ್ಟಿ ಮತ್ತು ಉಮೇಶ್ ಪಾಲ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಧರ ಶೆಟ್ಟಿ ವಂದಿಸಿದರು. ಇದೇ ವೇಳೆ ಭೀಷ್ಮವಿಜಯ ಯಕ್ಷಗಾನ ತಾಳಮದ್ದಳೆ ಪ್ರಸಿದ್ಧ ಕಲಾವಿದರಿಂದ ನಡೆಯಿತು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127
Be the first to comment on "ಸಿದ್ಧಕಟ್ಟೆ ಯಕ್ಷಮಿತ್ರರಿಂದ ಸಂಸ್ಮರಣೆ, ಸನ್ಮಾನ"