ಗಾಂಧೀಜಿ 150: ಬಂಟ್ವಾಳದಲ್ಲಿ ಛಾಯಾಚಿತ್ರ ಪ್ರದರ್ಶನ ಆರಂಭ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ  ಇಲಾಖೆ ಆಯೋಜಿಸಿರುವ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನವನ್ನು ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ಸೋಮವಾರ ಉದ್ಘಾಟಿಸಿದರು.

ಜಾಹೀರಾತು

ಗಾಂಧೀಜಿ ಜೀವನದ ಕುರಿತು ಪಠ್ಯಗಳಲ್ಲಿ ನಾವು ಓದಿರುತ್ತೇವೆ. ಆದರೆ ಅವರ ಬದುಕಿನ ವಿವಿಧ ಮಜಲುಗಳನ್ನು ತೋರಿಸುವ ಛಾಯಾಚಿತ್ರಗಳನ್ನು ನೋಡುವ ಅವಕಾಶಗಳು ಕಡಿಮೆ. ಬಂಟ್ವಾಳಕ್ಕೆ ಗಾಂಧೀಜಿ ಬಂದಿದ್ದರು ಎಂಬ ವಿಚಾರಗಳೊಂದಿಗೆ ಹಲವು ರೀತಿಯ ವೈವಿಧ್ಯಮಯ ಸನ್ನಿವೇಶಗಳನ್ನು ಒಟ್ಟಿಗೆ ನೋಡುವ ಅವಕಾಶ ಇಲ್ಲಿದೆ. ಇದನ್ನು ಸದುಪಯೋಗಪಡಿಸಬೇಕು, ಶಾಲಾ ಮಕ್ಕಳು ಇಲ್ಲಿಗೆ ಆಗಮಿಸಿ ಪ್ರದರ್ಶನವನ್ನು ನೋಡಿದರೆ ಮತ್ತಷ್ಟು ಜ್ಞಾನಸಂಪಾದನೆಗೆ ಅವಕಾಶವಾಗುತ್ತದೆ. ಗಾಂಧೀಜಿಯ ಸಂದೇಶಗಳ ಪಾಲನೆಯೂ ಮುಖ್ಯವಾಗಿದೆ ಎಂದು ಈ ಸಂದರ್ಭ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದರು.

ನವೆಂಬರ್ 11 ರಿಂದ  13 ವರೆಗೆ ಬಿ.ಸಿ. ರೋಡ್ ಬಂಟ್ವಾಳ ತಾಲೂಕು ಕಚೇರಿ ಮಿನಿ ವಿಧಾನಸೌಧದಲ್ಲಿ ಪ್ರದರ್ಶನ ನಡೆಯಲಿದ್ದು, ಇದರ ಸದುಪಯೋಗಪಡೆಯುವಂತೆ ಕೋರಿದ ವಾರ್ತಾಧಿಕಾರಿ, ಗಾಂಧೀಜಿ ಅವರ ಬದುಕಿನ ಸಮಗ್ರ ಮಾಹಿತಿಗಳನ್ನೊಳಗೊಂಡ ಅಪರೂಪದ ಛಾಯಾಚಿತ್ರಗಳು ಇಲ್ಲಿವೆ. ಇವುಗಳನ್ನು ವೀಕ್ಷಿಸಿ ಅವರ ಬದುಕಿನ ಸಾಧನೆಗಳ ಪರಿಚಯ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಾರ್ತಾಧಿಕಾರಿ ಖಾದರ್ ಶಾ ತಿಳಿಸಿದರು.

ಈ ಸಂದರ್ಭ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ, ಉಪತಹಸೀಲ್ದಾರ್ ರೂಪೇಶ್ ಕುಮಾರ್, ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಪಕ್ಕಳ, ಪಾಣೆಮಂಗಳೂರು ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗಾಂಧೀಜಿ 150: ಬಂಟ್ವಾಳದಲ್ಲಿ ಛಾಯಾಚಿತ್ರ ಪ್ರದರ್ಶನ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*