ಪಂಜಿಕಲ್ಲು ಗ್ರಾಮ ಪಂಚಾಯತ್ ನಲ್ಲಿ ತೆರವಾದ ಸ್ಥಾನಕ್ಕೆ ನ.12ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪೂಜಾರಿ 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬೆಂಬಲಿಗರು ಹರ್ಷ ವ್ಯಕ್ತಪಡಿಸಿ, ಸಂಭ್ರಮಿಸಿದರು.
ಗ್ರಾಪಂ ಉಪಚುನಾವಣೆಯಾದರೂ ಗೆದ್ದ ಬೆಂಬಲಿಗರನ್ನು ಅಭಿನಂದಿಸಲು ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಬೆಳಗ್ಗೆ ಬಂಟ್ವಾಳ ಮಿನಿವಿಧಾನ ಸೌಧಕ್ಕೆ ಆಗಮಿಸಿ ವಿಜೇತ ಅಭ್ಯರ್ಥಿ ಸುರೇಶ್ ಪೂಜಾರಿ ಅವರನ್ನು ಅಭಿನಂದಿಸಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಶೆಟ್ಟಿ, ತಾ.ಪಂ.ಸದಸ್ಯೆ ಪದ್ಮಾವತಿ, ಪ್ರಮುಖರಾದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬೂತ್ ಅಧ್ಯಕ್ಷ ವಿಕ್ಟರ್ ಪಾಯ್ಸ್, ಸದಾನಂದ ಶೆಟ್ಟಿ, ಜಗದೀಶ್ ಪೂಜಾರಿ, ವಿಶ್ವನಾಥ ಪೂಜಾರಿ, ರಾಜೇಶ್ ಗೌಡ ಪಂಜಿಕಲ್ಲು, ಲವೇಶ್ ದಡ್ಡಲಕಾಡು,ಪ್ರಕಾಶ್ ವಾಸ್, ಉದಯ ಮೇನಾಡ್,ಸಿಲ್ಸನ್, ಹರಿಕ್ ಪಿಂಟೋ, ಗಂಗಾಧರ ಪೂಜಾರಿ, ಮಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…