ವಿಟ್ಲದ ಕೋಟಿಕೆರೆ ಬದಿಯಲ್ಲಿ ನಿಂತು ಈಜಾಟ ವೀಕ್ಷಿಸುತ್ತಿದ್ದ 9ನೇ ತರಗತಿ ಬಾಲಕನೊಬ್ಬ ಆಕಸ್ಮಿಕವಾಗಿ ಬಿದ್ದು, ಮುಳುಗಿ ಮೃತಪಟ್ಟ ಘಟನೆ ವಿಟ್ಲ ಕಾಶಿಮಠದಲ್ಲಿ ಗುರುವಾರ ಸಂಜೆ ನಡೆದಿದೆ.
ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಜುಬೈದಾ ಎಂಬವರ ಪುತ್ರ, ವಿಟ್ಲದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಶ್ವದ್ ಅಹ್ಮದ್(14) ಮೃತಪಟ್ಟ ವಿದ್ಯಾರ್ಥಿ. ಇತರ ಮಂದಿ ಆತ ಮುಳುಗುತ್ತಿರುವುದನ್ನು ಕಂಡು ಬೊಬ್ಬೆ ಹೊಡೆದಾಗ ಸ್ಥಳೀಯರು ಆತನನ್ನು ಮೇಲೆತ್ತಿ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…