ಜೇನು ಕೃಷಿಯಿಂದ ಹೆಚ್ಚಿನ ಆದಾಯ ಸಾಧ್ಯ: ಮಮತಾ ಗಟ್ಟಿ

ತಮ್ಮ ತೋಟ, ಮನೆಯ ಹೂದೋಟದಲ್ಲಿ ಜೇನು ಸಾಕುವುದರಿಂದ ಆದಾಯವನ್ನೂ ಗಳಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ   ಇರಾ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ ಇರಾದ ಮಲಯಾಳಿ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಎರಡು ದಿವಸಗಳ ಜೇನು ಕೃಷಿ ತರಬೇತಿಯನ್ನು ಆಸಕ್ತ ಜೇನು ಕೃಷಿಕರಿಗಾಗಿ  ನಡೆಸಲಾಗಿತ್ತು. ಈ ಸಂದರ್ಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತೋಟದ ಬೆಳೆಯೊಂದಿಗೆ ಉಪಕಸುಬಾಗಿ ಜೇನು ಸಾಕಾಣಿಕೆ ಮಾಡಿ ಹೆಚ್ಚು ಆದಾಯಗಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿ ಕೃಷಿಯನ್ನು ಲಾಭದಾಯಕವಾಗಿ ಪರಿವರ್ತಿಸಿಕೊಳ್ಳಲು ಸಾದ್ಯವಿದೆ ಎಂದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಅಬ್ದುಲ್ ರಜಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೀರಪ್ಪ ಗೌಡ ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ತೋಟಗಾರಿಕೆ ಇಲಾಖೆ ಅಧಿಕಾರಿ ದಿನೇಶ್ ಪ್ರಸ್ತಾವನೆಗೈದರು. ಇಲಾಖೆಯ ಅಧಿಕಾರಿಗಳಾದ ರೆಹಾನಾ ಬೇಗಂ, ಹರೀಶ್ ಹಾಗೂ ಪಂಚಾಯತ್ ಕಾರ್ಯದರ್ಶಿ ನಳಿನಿ ಎ.ಕೆ. ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೇನು ಕೃಷಿಯಿಂದ ಹೆಚ್ಚಿನ ಆದಾಯ ಸಾಧ್ಯ: ಮಮತಾ ಗಟ್ಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*