ಸರಕಾರಿ ಕಚೇರಿಯಲ್ಲಿ ದುಡಿಯುತ್ತಿರುವ ನಾವು ಕನಕದಾಸರ ಸಾಹಿತ್ಯದಲ್ಲಿ ಉಲ್ಲೇಖವಾದಂತೆ ಜಾತಿ ತಾರತಮ್ಯ ಮಾಡದೆ ಸೇವೆಗಳನ್ನು ಕೊಡಬೇಕು ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಸಲಹೆ ನೀಡಿದರು.
ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನಕದಾಸ ಜಯಂತಿ ಆಚರಣೆಯಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಒಬ್ಬ ಮನುಷ್ಯನಿಗೆ ಜಾತಿ ಮುಖ್ಯವಲ್ಲ ಎಂಬುದನ್ನು ತೋರಿಸಿಕೊಟ್ಟ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ ಎಂದವರು ಹೇಳಿದರು. ಬಂಟ್ವಾಳ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೆಕಾರ್ ಮಾತನಾಡಿದದರು. ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ, ಪಾಣೆಮಂಗಳೂರು ಹೋಬಳಿಯ ಉಪತಹಶೀಲ್ದಾರ್ ರೂಪೇಶ್‌ಕುಮಾರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ತಾಲೂಕು ಕಚೇರಿ ಸಿಬಂದಿ, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು. ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ ಸ್ವಾಗತಿಸಿದರು. ತಾಲೂಕು ಕಚೇರಿ ವಿಷಯ ನಿರ್ವಾಹಕ ಮಲ್ಲೇಶ್ ವಂದಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.