ಶಿಕ್ಷಣ ಕ್ಷೇತ್ರದಲ್ಲಿ ಮಾಡುವ ಕೆಲಸ ಕಾರ್ಯಗಳು ಧನಾತ್ಮಕ ವಾಗಿ ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ವಿಧ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿ ದಿನನಿತ್ಯ ವಾರ್ತಾಪತ್ರಿಕೆ ಮತ್ತು ಇತರ ಪುಸ್ತಕ ಓದುವ ಹವ್ಯಾಸ ಬೆಳೆಸುವುದರಿಂದ ಸಾಮಾನ್ಯ ಜ್ಞಾನ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ. ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ಬೆಳೆಯುತ್ತಿರುವ ಈ ಜಗತ್ತಿನಲ್ಲಿ ನಾವೂ ನಮ್ಮನ್ನು ನವೀಕರಿಸಿದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್ ಬಂಗೇರ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ್ ಮೂಲ್ಯ ವಹಿಸಿದ್ದರು .ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಕಾರ್ಯದರ್ಶಿ ಪಲ್ಲವಿ ಕಾರಂತ, ರೋಟರಿ ಆನ್ನ್ಸ್ ಅಧ್ಯಕ್ಷೆ ವಿದ್ಯಾ ಎಸ್ ರೈ ,ರೋಟರಿ ಸದಸ್ಯರಾದ ಸುಕುಮಾರ ಬಂಟ್ವಾಳ, ನಾರಾಯಣ ಸಿ ಪೆರ್ನೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು .ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ ಸ್ವಾಗತಿಸಿ, ಶಿಕ್ಷಕಿ ಚೈತ್ರಾ ವಂದಿಸಿದರು .ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…