ಕಲ್ಲಡ್ಕ

ಓದುವ ಹವ್ಯಾಸದಿಂದ ಸಾಮಾನ್ಯ ಜ್ಞಾನ ವೃದ್ಧಿ: ಬಂಗೇರ

ಶಿಕ್ಷಣ ಕ್ಷೇತ್ರದಲ್ಲಿ ಮಾಡುವ ಕೆಲಸ ಕಾರ್ಯಗಳು ಧನಾತ್ಮಕ ವಾಗಿ ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ವಿಧ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿ ದಿನನಿತ್ಯ ವಾರ್ತಾಪತ್ರಿಕೆ ಮತ್ತು ಇತರ ಪುಸ್ತಕ ಓದುವ ಹವ್ಯಾಸ ಬೆಳೆಸುವುದರಿಂದ ಸಾಮಾನ್ಯ ಜ್ಞಾನ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ. ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ಬೆಳೆಯುತ್ತಿರುವ ಈ ಜಗತ್ತಿನಲ್ಲಿ ನಾವೂ ನಮ್ಮನ್ನು ನವೀಕರಿಸಿದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್ ಬಂಗೇರ ಹೇಳಿದರು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ್ ಮೂಲ್ಯ ವಹಿಸಿದ್ದರು .ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಕಾರ್ಯದರ್ಶಿ ಪಲ್ಲವಿ ಕಾರಂತ, ರೋಟರಿ ಆನ್ನ್ಸ್ ಅಧ್ಯಕ್ಷೆ  ವಿದ್ಯಾ ಎಸ್ ರೈ ,ರೋಟರಿ ಸದಸ್ಯರಾದ ಸುಕುಮಾರ ಬಂಟ್ವಾಳ, ನಾರಾಯಣ ಸಿ ಪೆರ್ನೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು .ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ ಸ್ವಾಗತಿಸಿ, ಶಿಕ್ಷಕಿ ಚೈತ್ರಾ ವಂದಿಸಿದರು .ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ