ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಶಾಲಾ ವಿದ್ಯಾರ್ಥಿ ನಾಯಕಿ ಎಂ.ಎಸ್. ದೀಪಾಲಿ ವಿದ್ಯಾರ್ಥಿಗಳಾದ ನಾವು ಒಳ್ಳೆಯ ಸಂಸ್ಕೃತಿ ಇದ್ದಲ್ಲಿ ಪರಿಪೂರ್ಣವಾದ ವ್ಯಕ್ತಿತ್ವವನ್ನು ರೂಪಿಸಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ಪ್ರಹ್ಲಾದ್ ಜೆ.ಶೆಟ್ಟಿ ಮಾತನಾಡಿ ಭವ್ಯ ಭಾರತದ ಪರಂಪರೆಯಲ್ಲಿ ದೇಶಕ್ಕಾಗಿ ಒಳಿತು ಮಾಡುವ ವ್ಯಕ್ತಿತ್ವಗಳನ್ನು ರೂಪಿಸಬೇಕು. ಮಕ್ಕಳು ಬೇರೆ ಬೇರೆ ಚಟುವಟಿಕೆಯಲ್ಲಿ ತೊಡಗಿಕೊಂಡರೂ ತನ್ನ ಮೂಲ ಉದ್ದೇಶವನ್ನು ಮರೆಯಬಾರದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.ಆಡಳಿತಾಧಿಕಾರಿ ಸಿ.ಶ್ರೀಧರ್ ಮಾತನಾಡಿ ಮಕ್ಕಳಾದ ನಾವು ಈ ದೇಶಕ್ಕಾಗಿ ಏನು ಮಾಡಬೇಕು ಎಂಬುದನ್ನು ಚಿಂತಿಸಬೇಕು. ಸದೃಢವಾದ ದೇಹ ಮತ್ತು ಉತ್ತಮ ಆರೋಗ್ಯದಿಂದ ಬುದ್ಧಿವಂತರಾಗಿ ಬಾಳಿ, ನೆಹರುರವರ ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಶಾಲಾ ಉಪನಾಯಕಿ ಆಶಿತಾ.ಎನ್. ರಾವ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿರಾಮ ಸ್ವಾಗತಿಸಿ, ಶಯನ್ ಕುಮಾರ್ ವಂದಿಸಿದರು. ಶರಣ್ಯ ,ಫರ್ಝಾನ ಹಾಗೂ ಅಝ್ಮೀಯಾ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ"