ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಸೋಮವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನರಿಕೊಂಬು ಗ್ರಾಮದ ಪಿತ್ತಿಲಗುಡ್ಡೆ ನಿವಾಸಿ ಯೂಸುಫ್ ಎಂಬವರ ಪುತ್ರ ಫವಾಝ್ (22) ಮೃತಪಟ್ಟ ಯುವಕ.ಎರಡು ದಿನಗಳ ಹಿಂದೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದಾಗ ಪಿಕಪ್ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿತ್ತು. ಬಳಿಕ ಮುಂದಕ್ಕೆ ಚಲಿಸಿದ ದ್ವಿಚಕ್ರವಾಹನ ಇನ್ನೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿತ್ತು. ಪರಿಣಾಮ ದ್ವಿಚಕ್ರ ವಾಹನ ಸವಾರ ಫವಾಝ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.