ನೈನಾಡು ಸರ್ಕಾರಿ ಪ್ರೌಢಶಾಲೆ ಆರಂಭಗೊಂಡು ೨೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ಟಿ.ಹಷೇಂದ್ರ ಪೈ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಕಾರ್ಯಾಧ್ಯಕ್ಷರಾಗಿ ಮುಖ್ಯಶಿಕ್ಷಕ ಅಶೋಕ್ ಕುಮಾರ್, ಕಾರ್ಯದರ್ಶಿಯಾಗಿ ಆಶಲತಾ, ಜೊತೆ ಕಾರ್ಯದರ್ಶಿಯಾಗಿ ವಿಜೇತ, ಉಪಾಧ್ಯಕ್ಷರಾಗಿ ಸ್ಥಳೀಯ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ರಮೇಶ ಕುಡ್ಮೇರು, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಅಬ್ದುಲ್ ರಹಿಮಾನ್, ಇನಾಸ್ ರಾಡ್ರಿಗಸ್, ನೆಲ್ವಿಸ್ಟರ್ ಪಿಂಟೋ, ಸುಂದರ ಶೆಟ್ಟಿ, ಪ್ರಸಾದ್ ಜೈನ್ ಆಯ್ಕೆಗೊಂಡಿದ್ದಾರೆ. ಇದೇ ವೇಳೆ ಆರ್ಥಿಕ ಮತ್ತು ಸಾಂಸ್ಕೃತಿಕ ಸಮಿತಿ ರಚಿಸಲಾಗಿದ್ದು, ಶಾಲೆಯಲ್ಲಿ ಸುಮಾರು ರೂ ೧೫ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಮಿತಿ ನಿರ್ಧರಿಸಿದೆ ಎಂದು ಮುಖ್ಯಶಿಕ್ಷಕ ಅಶೋಕ್ ಕುಮಾರ್ ತಿಳಿಸಿದ್ದಾರೆ.
Be the first to comment on "ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷರಾಗಿ ಹಷೇಂದ್ರ ಪೈ ಆಯ್ಕೆ"