ಸಾರ್ವಜನಿಕರಿಗೂ ಹೆಲ್ತ್ ಮೀಡಿಯಾ ಕ್ಲಿನಿಕ್ – ಉಚಿತ ಆರೋಗ್ಯ ತಪಾಸಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನಿಂದ ‘ಹೆಲ್ತ್ ಮೀಡಿಯಾ ಕ್ಲಿನಿಕ್ ಯೋಜನೆಯಡಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣೆ ಹಲವು ತಿಂಗಳಿನಿಂದ ನಡೆಯುತ್ತಿದ್ದು, ಇದನ್ನು ಸಾರ್ವಜನಿಕರಿಗೂ ಮುಂದುವರಿಸಲು ನಿರ್ಧರಿಸಲಾಗಿದೆ.

ಜಾಹೀರಾತು

ಉಚಿತ ಆರೋಗ್ಯ ಶಿಬಿರವನ್ನು ನ.19ರಂದು ಬೆಳಗ್ಗೆ 11.15ಕ್ಕೆ ಪತ್ರಿಕಾ ಭವನದಲ್ಲಿ ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಅಶೋಕ್ ಹೆಗ್ಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಲಿದ್ದಾರೆ.

ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ  ಇಂದಿನಿಂದ ಪ್ರತಿ ತಿಂಗಳ ಎರಡನೇ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಇದರ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು. ಈಗಾಗಲೇ 200 ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಅರೋಗ್ಯ ತಪಾಸಣೆ ಮಾಡಿರುತ್ತಾರೆ.

ತಪಾಸಣೆ ವಿವರ: ರಕ್ತ ತಪಾಸಣೆ, ಬಿಪಿ, ಇಸಿಜಿ ಪರೀಕ್ಷೆ, ಡಯಾಬಿಟೀಸ್ ಸೇರಿದಂತೆ ಅರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ವೈದ್ಯರೊಂದಿಗೆ ಸಮಾಲೋಚನೆ ಮಾಡಬಹುದಾಗಿದೆ. ಮಹಿಳೆಯರಿಗೆ ತಜ್ಞ  ವೈದ್ಯೆ ರಿಂದ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪತ್ರಕರ್ತರು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಾರ್ವಜನಿಕರಿಗೂ ಹೆಲ್ತ್ ಮೀಡಿಯಾ ಕ್ಲಿನಿಕ್ – ಉಚಿತ ಆರೋಗ್ಯ ತಪಾಸಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*