
ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ- ವಿಕ್ರಮ ಜೋಡುಕರೆ ಬಯಲು ಕಂಬಳ ಡಿ.7ರಂದು ನಡೆಯಲಿದ್ದು, ಕಂಬಳ ಸಮಿತಿ ಅಧ್ಯಕ್ಷರಾಗಿ ಕೈತ್ರೋಡಿ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ಪುನರಾಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮಗಳ ಕೃಷಿಕರು ಒಟ್ಟಾಗಿ ಈ ಹಿಂದೆ ಗ್ಯಾಸ್ ಲೈಟ್ ಬೆಳಕಿನಲ್ಲಿ ಏತ ನೀರಾವರಿ ಮೂಲಕ ಕಂಬಳ ಕರೆಗೆ ನೀರು ಹಾಯಿಸುತ್ತಿದ್ದು, ಅಂದಿನ ದಿನಗಳಲ್ಲಿ ವಿಜೇತರಿಗೆ ಬಾಳೆಗೊನೆ, ಸೀಯಾಳ ಮತ್ತಿತರ ಕೃಷಿ ವಸ್ತುಗಳನ್ನೇ ನೀಡಲಾಗುತ್ತಿತ್ತು. ಇಲ್ಲಿನ ಮಾಗಣೆಯ ಕಾರಣಿಕ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಳದ ಜೊತೆಗೆ ಧಾರ್ಮಿಕ ನಂಟು ಹೊಂದಿರುವ ಈ ಜೋಡುಕರೆ ಬಯಲು ಕಂಬಳಕ್ಕೆ ಪ್ರಸಕ್ತ ಆಧುನಿಕ ಸ್ಪರ್ಶ ನೀಡಲಾಗಿದೆ. ಈಗಾಗಲೇ ಕಂಬಳ ಕರೆ ದುರಸ್ತಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127


Be the first to comment on "ಕಂಬಳ ಸಮಿತಿ ಅಧ್ಯಕ್ಷರಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ"