ಬಂಟ್ವಾಳದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಡಾಂಗಲ್, ನೋಟ್ ಪ್ಯಾಡ್ ಗೆ ಅನುದಾನ: ಶಾಸಕ

ಬಂಟ್ವಾಳ  ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ಆನ್‌ಲೈನ್ ನೋಂದಣಿಗಾಗಿ ಸೈಬರ್‌ಗಳಿಗೆ ಎಡತಾಕುವುದನ್ನು ತಪ್ಪಿಸುವ ಸಲುವಾಗಿ ಪ್ರತಿ ಶಾಲೆಗೆ ನೋಟ್‌ಪ್ಯಾಡ್ ಹಾಗೂ ಡೋಂಗಲ್ ಒದಗಿಸಲಾಗುವುದು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರೊಂದಿಗೆ ನಡೆಸಿದ ಸಂವಾದ ಸಂದರ್ಭ ಈ ವಿಚಾರ ಪ್ರಕಟಿಸಿದರು. ಪ್ರತಿ ಶಾಲೆಗಳಿಗೆ ನೋಟ್‌ಪ್ಯಾಡ್ ಹಾಗೂ ಡೋಂಗಲ್ಗೆ  ಒಂದು ಶಾಲೆಗೆ ತಲಾ ೧೦ ಸಾವಿರ ರೂ.ಗಳಂತೆ ಸುಮಾರು ೧೫ ಲಕ್ಷ ರೂ.ಬೇಕಾಗುತ್ತದೆ ಎಂದು ಶಿಕ್ಷಣಾಧಿಕಾರಿ ಜ್ಞಾನೇಶ್ ತಿಳಿಸಿದ ಸಂದರ್ಭ ಖರೀದಿಗೆ ಬೇಕಾದ ಅನುದಾನ ಒದಗಿಸುವುದಾಗಿ ಶಾಸಕರು ತಿಳಿಸಿದರು.

ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವುದು ಹೆಮ್ಮೆ ಎನಿಸುವಂತೆ ಶಿಕ್ಷಕರು ಶಿಕ್ಷಣ ನೀಡಬೇಕು ಗುಣಮಟ್ಟದ ಶಿಕ್ಷಣ ಒದಗಿಸಬೇಕು. ವಿದ್ಯಾರ್ಥಿಗಳು ಪ್ರೌಢಶಾಲೆಗೆ ಬರುವಾಗ ಕಲಿಕೆಯಲ್ಲಿ ಹಿಂದುಳಿಯುವಂತಾಗಿ ಪ್ರೌಢಶಾಲಾ ಶಿಕ್ಷಕರಿಗೆ ಸಮಸ್ಯೆ ಉಂಟಾಗಬಾರದು ಎಂದರು. ಕ್ಷೇತ್ರದ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಇರುವುದರ ಕುರಿತು ಬಿಇಒ ಗಮನಕ್ಕೆ ತರಲು ಸೂಚಿಸಿದ ಶಾಸಕ, ಈ ಕುರಿತು 10 ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆಯುವುದಾಗಿ ಹೇಳಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಡಾಂಗಲ್, ನೋಟ್ ಪ್ಯಾಡ್ ಗೆ ಅನುದಾನ: ಶಾಸಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*