ಬಂಟ್ವಾಳ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ಆನ್‌ಲೈನ್ ನೋಂದಣಿಗಾಗಿ ಸೈಬರ್‌ಗಳಿಗೆ ಎಡತಾಕುವುದನ್ನು ತಪ್ಪಿಸುವ ಸಲುವಾಗಿ ಪ್ರತಿ ಶಾಲೆಗೆ ನೋಟ್‌ಪ್ಯಾಡ್ ಹಾಗೂ ಡೋಂಗಲ್ ಒದಗಿಸಲಾಗುವುದು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರೊಂದಿಗೆ ನಡೆಸಿದ ಸಂವಾದ ಸಂದರ್ಭ ಈ ವಿಚಾರ ಪ್ರಕಟಿಸಿದರು. ಪ್ರತಿ ಶಾಲೆಗಳಿಗೆ ನೋಟ್‌ಪ್ಯಾಡ್ ಹಾಗೂ ಡೋಂಗಲ್ಗೆ ಒಂದು ಶಾಲೆಗೆ ತಲಾ ೧೦ ಸಾವಿರ ರೂ.ಗಳಂತೆ ಸುಮಾರು ೧೫ ಲಕ್ಷ ರೂ.ಬೇಕಾಗುತ್ತದೆ ಎಂದು ಶಿಕ್ಷಣಾಧಿಕಾರಿ ಜ್ಞಾನೇಶ್ ತಿಳಿಸಿದ ಸಂದರ್ಭ ಖರೀದಿಗೆ ಬೇಕಾದ ಅನುದಾನ ಒದಗಿಸುವುದಾಗಿ ಶಾಸಕರು ತಿಳಿಸಿದರು.
ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವುದು ಹೆಮ್ಮೆ ಎನಿಸುವಂತೆ ಶಿಕ್ಷಕರು ಶಿಕ್ಷಣ ನೀಡಬೇಕು ಗುಣಮಟ್ಟದ ಶಿಕ್ಷಣ ಒದಗಿಸಬೇಕು. ವಿದ್ಯಾರ್ಥಿಗಳು ಪ್ರೌಢಶಾಲೆಗೆ ಬರುವಾಗ ಕಲಿಕೆಯಲ್ಲಿ ಹಿಂದುಳಿಯುವಂತಾಗಿ ಪ್ರೌಢಶಾಲಾ ಶಿಕ್ಷಕರಿಗೆ ಸಮಸ್ಯೆ ಉಂಟಾಗಬಾರದು ಎಂದರು. ಕ್ಷೇತ್ರದ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಇರುವುದರ ಕುರಿತು ಬಿಇಒ ಗಮನಕ್ಕೆ ತರಲು ಸೂಚಿಸಿದ ಶಾಸಕ, ಈ ಕುರಿತು 10 ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆಯುವುದಾಗಿ ಹೇಳಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127