ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶ ಒಳಗೊಂಡ ಸಂಪ್ರದಾಯಬದ್ಧ ಸಮಾಜ ಬಿಲ್ಲವ ಸಮಾಜ ಎಂದು ಖ್ಯಾತ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಹೇಳಿದ್ದಾರೆ.
ಕಲ್ಲಡ್ಕದ ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕಲ್ಲಡ್ಕದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಗೋಳ್ತಮಜಲು ,ಬಾಳ್ತಿಲ ,ವೀರಕಂಬ ,ಅಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳ ಸೇರುವಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಬಿಲ್ಲವ ಸಮಾಜದ ಯುವ ಬಾಂದವರು ಸಂಸ್ಕಾರಯುತವಾಗಿ ಜೀವನ ನಡೆಸಬೇಕೆಂದರು. ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ ,ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ಜಯಂತ ನಡುಬೈಲು, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜ ಶೇಖರ ಕೋಟ್ಯಾನ್, ಚಲನಚಿತ್ರ ನಟಿ ನವ್ಯ ಪೂಜಾರಿ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಪುಷ್ಪ ಸತೀಶ್, ಕಲ್ಲಡ್ಕ ಬಿಲ್ಲವ ಸಂಘದ ಉಪಾಧ್ಯಕ್ಷ ಅಣ್ಣು ಪೂಜಾರಿ ಬಿ ಕೆ, ಗ್ರಾಮ ಸಮಿತಿ ಅಧ್ಯಕ್ಷರಾದ ಮನೋಜ್ ಕಟ್ಟೆಮಾರ್, ರಾಜೇಶ್ ಸುವರ್ಣ ಕೃಷ್ಣಕೊಡಿ, ಯತಿನ್ ಕುಮಾರ್ ಬೊಂಡಾಲ, ರವಿ ಸುವರ್ಣಬೈಲು, ಜಯಪ್ರಕಾಶ್ ತಕ್ಕಿ ಪಾಪು, ಆನಂದ ಪೂಜಾರಿ ಪ್ರಭುಗಳಬೆಟ್ಟು ಉಪಸ್ಥಿತರಿದ್ದರು. ಚೆನ್ನಪ್ಪ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ಪೂಜಾರಿ ಹೊಸಕಟ್ಟ ಸ್ವಾಗತಿಸಿದರು. ವಸಂತ ಪೂಜಾರಿ ಬಟ್ಟಹಿತ್ತಿಲು ಧನ್ಯವಾದ ಸಮರ್ಪಿಸಿದರು. ದಿನೇಶ್ ಸುವರ್ಣ ಕೃಷ್ಣಕೋಡಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕೇಶವ ಶಾಂತಿ ನೇತೃತ್ವದಲ್ಲಿ ಗುರು ಪೂಜೆ ಹಾಗೂ ಶ್ರೀ ಶಾರದಾಂಬ ಭಜನ ಮಂದಿರ ಶೃಂಗಗಿರಿ ಗುಂಡಿಮಜಲು ಅವರಿಂದ ಭಜನಾ ಸಂಕೀರ್ತನೆ ನಡೆಯಿತು.
ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ