ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬುಧವಾರ ನಡೆದ ಶತಮಾನೋತ್ತರ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾಗಿ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಶತಮಾನೋತ್ತರ ಬೆಳ್ಳಿಹಬ್ಬದ ನೇತೃತ್ವ ವಹಿಸಿದ
ರೋಷನ್ ಬೊನಿಫಾಸ್ ಮಾರ್ಟಿಸ್ ಹಾಗೂ ಅನಿತಾ ರೋಷನ್ ಮಾರ್ಟಿಸ್ ದಂಪತಿಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ ರವರು ಸನ್ಮಾನಿಸಿದರು.
ಈ ಸಂದರ್ಭ ಬೆಳ್ತಂಗಡಿ ಬಿಷಪ್ ಅತೀ ವಂದನೀಯ ಡಾ.ಲಾರೆನ್ಸ್ ಮುಕ್ಕುಝಿ, ಪುತ್ತೂರು ಬಿಷಪ್ ಅತೀ ವಂದನೀಯ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್, ಮೊಗರ್ನಾಡು ಚರ್ಚ್ ನ ಧರ್ಮಗುರು ಡಾ.ಮಾರ್ಕ್ ಕಾಸ್ಟೆಲಿನೋ, ಸೂರಿಕುಮೇರು ಚರ್ಚ್ ನ ಧರ್ಮಗುರು ವಂ.ಫಾದರ್ ಗ್ರೆಗರಿ ಪಿರೇರಾ, ಪಾಲನಾ ಸಮಿತಿ ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನೆರೆದ ಸರ್ವಧರ್ಮೀಯರೂ ಕರತಾಡನದೊಂದಿಗೆ ಅಭಿನಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶತಮಾನೋತ್ತರ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಸನ್ಮಾನ"
Be the first to comment on "ಶತಮಾನೋತ್ತರ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಸನ್ಮಾನ"