ಭಯಮುಕ್ತ ಸಮಾಜ ಭಜನೆ ಶಕ್ತಿ: ಮಾಣಿಲ ಶ್ರೀಗಳು

ಭಯಮುಕ್ತ ಸಮಾಜ ನಿರ್ಮಾಣಕ್ಕೆ ಭಜನೆ ಕೊಡುಗೆ ದೊಡ್ಡದು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಜಾಹೀರಾತು

ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಬಂಟ್ವಾಳ ತಾಲೂಕು ಮಟ್ಟದ ತುಳು ನೃತ್ಯ ಭಜನಾ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿ ಭಜನಾ ತಂಡಗಳಿಗೆ ಶುಭ ಹಾರೈಸಿದರು. ಭಜನೆ ನಡೆಸುವ ಸಂದರ್ಭ ಭಾವನೆಯನ್ನು ಜತೆಗೂಡಿಸಬೇಕು. ಭಜನೆ ಮಾಡುವವರಿಗೆ ಹೆದರಿಕೆ ಇರುವುದಿಲ್ಲ. ಶಕ್ತಿಯುತವಾದ ಸದೃಢ ಸಮಾಜ ನಿರ್ಮಾಣಕ್ಕೆ ಭಜನೆ ಕೊಡುಗೆ ನೀಡುತ್ತದೆ ಎಂದು ಹೇಳಿದ ಅವರು, ಧನಾತ್ಮಕವಾದ ಶಕ್ತಿಯನ್ನು ಒದಗಿಸುವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಹಿಂದುತ್ವ ಉಳಿವಿಗೆ ಭಜನೆ ಕಾರಣ. ಭಜನೆ ಆತ್ಮವಿಶ್ವಾಸ ವೃದ್ಧಿಸುತ್ತದೆ ಹಾಗೂ ನೃತ್ಯಭಜನೆಯಿಂದ ದೈಹಿಕವಾಗಿ ತೊಡಗಿಸಿಕೊಳ್ಳಲು ಸಾಧ್ಯ. ತುಳು ಪಂಚದ್ರಾವಿಡ ಭಾಷೆಗಳಲ್ಲಿ ಪ್ರಾಚೀನವಾಗಿದ್ದು, ತುಳುವರು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು.

ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅಶ್ವನಿ ಕುಮಾರ್ ರೈ, ಉದ್ಯಮಿ ನಾಗೇಶ್ ಕುಲಾಲ್, ಕಾರ್ಯಕ್ರಮದ ಕೋಶಾಧಿಕಾರಿ, ಉದ್ಯಮಿ ಸುಭಾಶ್ಚಂದ್ರ ಜೈನ್ ಶುಭ ಹಾರೈಸಿದರು. ಭಜನಾ ಸಮಿತಿ ಸಂಚಾಲಕ ಸರಪಾಡಿ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಮತ್ತೋರ್ವ ಸಂಚಾಲಕ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತನಾಡಿದರು. ತುಳುಕೂಟ ಕಾರ್ಯದರ್ಶಿ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು. ಭಜನಾ ಸಮಿತಿ ಸಂಚಾಲಕ ಮಂಜು ವಿಟ್ಲ ವಂದಿಸಿದರು. ಇದೇ ವೇಳೆ ವಾರದ ಹಿಂದೆ ತುಳುಕೂಟ ಆಯೋಜಿಸಿದ ಕತೆ, ಕವನ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಮೇಶ್ ನಾಯಕ್ ರಾಯಿ ಬಹುಮಾನಿತರ ಪಟ್ಟಿ ವಾಚಿಸಿದರು. ಬಳಿಕ ಸುಮಾರು 29 ತಂಡಗಳು ತುಳು ಭಾಷೆಯಲ್ಲಿ ಕುಣಿತ ಭಜನೆ ಸ್ಪರ್ಧೆಯಲ್ಲಿ ಪಾಲ್ಗೊಂಡವು. ರಾಮಕೃಷ್ಣ ಕಾಟುಕುಕ್ಕೆ, ಅರುಣಾ ರಾವ್ ಕಟೀಲು ಮತ್ತು ಕಿಶೋರ್ ಪೆರ್ಲ ತೀರ್ಪುಗಾರರಾಗಿ ಹಾಗೂ ಶೀನಪ್ಪ ನಾಯ್ಕ್ ಸ್ಪರ್ಧೆಗೆ ಸಹಕರಿಸಿದರು. ಭಜನಾ ಸ್ಪರ್ಧೆಯ ನಿರ್ವಹಣೆಯನ್ನು ತುಳು ಸಾಹಿತ್ಯ ಅಕಾಡಮಿ ಸದಸ್ಯೆ ಮಲ್ಲಿಕಾ ಶೆಟ್ಟಿ ನಡೆಸಿದರು. ಕಾರ್ಯಕ್ರಮದಲ್ಲಿ ತುಳುಕೂಟದ ನಾನಾ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭಯಮುಕ್ತ ಸಮಾಜ ಭಜನೆ ಶಕ್ತಿ: ಮಾಣಿಲ ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*