ಬಂಟ್ವಾಳ

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಡಿಕ್ಕಿ – ಚಾಲಕ, ನಿರ್ವಾಹಕ ವಿರುದ್ಧ ದೂರು

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸೊಂದು ಬಿ.ಸಿ.ರೋಡಿನಲ್ಲಿ ನಿಂತಿದ್ದ ಸಂದರ್ಭ ಡಿಕ್ಕಿಯಾಗಿ ಅಪಘಾತ ನಡೆಸಿದ ಪರಿಣಾಮ ಪತ್ರಕರ್ತ ಅಬ್ದುಲ್ ಲತೀಫ್ (51) ಗಾಯಗೊಂಡ ಘಟನೆ ನಡೆದಿದ್ದು, ಈ ಕುರಿತು ಸೋಮವಾರ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಲತೀಫ್ ಅವರು ಬಿ.ಸಿ.ರೋಡಿನ ಹೋಟೆಲ್ ಸತ್ಕಾರ್ ಬಳಿ ಹೆದ್ದಾರಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭ ಘಟನೆ ನಡೆದಿತ್ತು.

ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಲತೀಫ್ ಗಾಯಗೊಂಡು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದರೂ ಚೇತರಿಕೆ ಕಾಣದ ಲತೀಫ್ ನೋವು ಉಲ್ಬಣಗೊಂಡ ಪರಿಣಾಮ ನಡೆದಾಡಲು ಆಗದ ಸ್ಥಿತಿಯಲ್ಲಿದ್ದು, ಸೋಮವಾರ ಠಾಣೆಗೆ ಬಂದು ಈ ಬಗ್ಗೆ ಲಿಖಿತ ದೂರು ನೀಡಿದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಸಂಚಾರಿ ಪೊಲೀಸರು ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts