ತುಂಬೆ ಸಮೀಪ ನೇತ್ರಾವತಿ ನದಿ ಕಿನಾರೆಯ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಗಳನ್ನು ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ತಂಡ ಗುರುವಾರ ತೆರವುಗೊಳಿಸಿದೆ.
ಪರನೀರು ಎಂಬಲ್ಲಿ ಹೊಳೆ ಪೊರಂಬೋಕು ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ 22 ಶೆಡ್ ಗಳನ್ನು ಕಾರ್ಮಿಕರನ್ನಿರಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ ಎನ್ನಲಾಗಿದ್ದು, ಗುರುವಾರ ಇವುಗಳ ತೆರವು ಕಾರ್ಯಾಚರಣೆ ನಡೆಯಿತು. ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ತಹಸೀಲ್ದಾರ್ ರಶ್ಮಿ ಎಸ್ ಆರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ ಹಾಜರಿದ್ದು ಸಿಬ್ಬಂದಿ ಸದಾಶಿವ ಕೈಕಂಬ, ಪುರುಷೋತ್ತಮ ಸಹಕರಿಸಿದರು.
Be the first to comment on "ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ: ಶೆಡ್ ತೆರವು"