ವಿಟ್ಲ

ಶ್ರೀದತ್ತ ಜಯಂತ್ಯುತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ – ಯಕ್ಷಗಾನ ಬಯಲಾಟ ಸಪ್ತಾಹ

  • ಒಡಿಯೂರಿನಲ್ಲಿ 5ರಿಂದ 11 ತನಕ

ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಹಾಗೂ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವಶ್ರೀ ದತ್ತ ಮಹಾಯಾಗ ಸಪ್ತಾಹ ವಿವಿಧ ವೈದಿಕಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಯಕ್ಷಗಾನ ಬಯಲಾಟ ಸಪ್ತಾಹವು ಜರಗಲಿದೆ.

ಪ್ರತಿದಿನ ಶ್ರೀ ಗುರುಚರಿತ್ರೆ ಪಾರಾಯಣ, ವೇದ ಪಾರಾಯಣ, ಶ್ರೀ ಗುರುಚರಿತಾಮೃತ ಪ್ರವಚನ. ಪ್ರವಚನಕಾರರಾಗಿ ಪ್ರೊ. ಚಂದ್ರಪ್ರಭಾ ಹೆಗ್ಡೆ, ನಿವೃತ್ತ ಪ್ರಾಂಶುಪಾಲರು, ಶಿರ್ವ, ಸೂರ್ಯನಾರಾಯಣ ಭಟ್ ಕಶೆಕೋಡಿ, ಡಾ. ಭಾಸ್ಕರ ಭಟ್ ಸೋಂದಾ, ಉಡುಪಿ, ಡಾ. ಎಂ. ಪ್ರಭಾಕರ ಜೋಶಿ, ಮಂಗಳೂರು, ಡಾ. ಗುರುದಾಸ್ ಎಸ್.ಪಿ., ಮಂಗಳೂರು, ವಿದ್ವಾನ್ ವಿ.ಬಿ. ಹಿರಣ್ಯ ಭಾಗವಹಿಸಲಿರುವರು. ಮಧ್ಯಾಹ್ನ ಘಂಟೆ ೧೨.೩೦ಕ್ಕೆ ಮಹಾಪೂಜೆ, ಮಹಾಸಂತರ್ಪಣೆ. ಅಪರಾಹ್ಣ ಘಂಟೆ 2ರಿಂದ ಯಕ್ಷಗಾನ ಬಯಲಾಟ. ರಾತ್ರಿ ಘಂಟೆ 7ರಿಂದ ರಂಗಪೂಜೆ, ಬೆಳ್ಳಿ ರಥೋತ್ಸವ, ಪ್ರಸಾದ ವಿತರಣೆ.

ಡಿ.5ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ನಾಗತಂಬಿಲ ನಡೆಯಲಿದೆ. ಬೆಳಿಗ್ಗೆ ಘಂಟೆ ೯.೦೦ರಿಂದ ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ. ಬಳಿಕ ಗುರುಭಜಕರಿಗೆ ಪೂಜ್ಯ ಶ್ರೀಗಳವರಿಂದ ಶ್ರೀ ದತ್ತ ಮಾಲಾಧಾರಣೆ. ಸಂಜೆ ಶ್ರೀ ದತ್ತಾಂಜನೇಯ ದೇವರ ಪಲ್ಲಕಿ ಉತ್ಸವ.

ಡಿ.7ರಂದು ಬೆಳಗ್ಗೆ 11 ಘಂಟೆಗೆ ಬೋಳಾರ ನಾರಾಯಣ ಶೆಟ್ಟಿ ಪ್ರಶಸ್ತಿ ಸಮಾರಂಭ ನಡೆಯಲಿದೆ. ಬೆಳಿಗ್ಗೆ ಘಂಟೆ ೯.೦೦ ಕ್ಕೆ ಶ್ರೀ ದತ್ತಮಾಲಾಧಾರಿಗಳಿಂದ ನಾಮಸಂಕೀರ್ತನಾ ಶೋಭಾಯಾತ್ರೆ. ಬೆಳಿಗ್ಗೆ ಘಂಟೆ ೧೦.೦೦ರಿಂದ ಪೂಜ್ಯ ಶ್ರೀಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ. ವಿಸೇಷ ಆಹ್ವಾನಿತರಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್, ನವಿಮುಂಬೈನ ಘನ್ಸೋಲಿಯ ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಘಂಟೆ ೧೨.೦೦ರಿಂದ ವೇದ ಪಾರಾಯಣ- ಶ್ರೀ ಗುರುಚರಿತ್ರೆ ಪಾರಾಯಣ ಸಮಾಪ್ತಿ. ಶ್ರೀ ದತ್ತ ಮಹಾಯಾಗದ ಪೂರ್ಣಾಹುತಿ. ಕಲ್ಪೋಕ್ತ ಪೂಜೆ, ಮಹಾಪೂಜೆ, ದತ್ತ ಸಂಪ್ರದಾಯದಂತೆ ಮಧುಕರೀ; ಮಂತ್ರಾಕ್ಷತೆ. ಮಹಾಸಂತರ್ಪಣೆ. ರಾತ್ರಿ ರಂಗಪೂಜೆ, ಬೆಳ್ಳಿ ರಥೋತ್ಸವ, ಉಯ್ಯಾಲೆ ಸೇವೆ. ರಾತ್ರಿ ಘಂಟೆ ೯.೩೦೦ರಿಂದ ಪೆರ್ಡೂರು ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts