ಬಿ.ಎ. ಗ್ರೂಪ್‌ನ ಸ್ಥಾಪಕಾಧ್ಯಕ್ಷ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರ ಜೀವನ ಸಾಧನೆ ತಿಳಿಸುವ ಅಬ್ಬಾ (ಎ ಟ್ರಿಬ್ಯೂಟ್ ಫಾರ್ ಅವರ್ ಫಾದರ್) ಪುಸ್ತಕ ಬಿಡುಗಡೆ ಹಾಗೂ ಸಾಕ್ಷ್ಯಚಿತ್ರ ಅನಾವರಣ ಕಾರ್ಯಕ್ರಮ ಬುಧವಾರ ತುಂಬೆ ಬಿ.ಎ. ಕಾಲೇಜಿನ ಮೈದಾನದಲ್ಲಿ ನಡೆಯಿತು.
ಶಿವಮೊಗ್ಗದ ಬಿಷಪ್ ಫಾದರ್ ಫ್ರಾನ್ಸಿಸ್ ಸೆರಾವೋ ಎಸ್.ಜೆ. ಅಬ್ಬಾ ಪುಸ್ತಕವನ್ನು ಬಿಡುಡೆಗೊಳಿಸಿದರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಾಕ್ಷ್ಯಚಿತ್ರ ಅನಾವರಣಗೊಳಿಸಿದರು.
ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರನ್ನು ಶಿವಮೊಗ್ಗದ ಬಿಷಪ್ ಫಾದರ್ ಫ್ರಾನ್ಸಿಸ್ ಸೆರಾವೋ ಎಸ್.ಜೆ. ಅವರು ಸನ್ಮಾನಿಸಿದರು. ಮಾಜಿ ಸಚಿವ ಬಿ. ರಮಾನಾಥ ರೈ, ಶಾಸಕ ಯು.ಟಿ.ಖಾದರ್, ಎಂಎಲ್‌ಸಿ ಹರೀಶ್ ಕುಮಾರ್, ಬೆಂಗಳೂರಿನ ಟೀಕೇಸ್ ಇನ್‌ಟೀರಿಯರ್ ಸೊಲೂಶನ್ ಪ್ರೈ.ಲಿ. ಟಿ.ಕೆ. ಉಮರ್, ಯೆನೆಪೋಯ ಅಬ್ದುಲ್ಲ ಕುಂಞಿ, ಯೆನೆಪೋಯ ಮುಹಮ್ಮದ್ ಕುಂಞಿ, ಪಿ.ಕೆ. ಗ್ರೂಪ್ ಕ್ಯಾಲಿಕೆಟ್‌ನ ಪಿ.ಕೆ. ಅಹ್ಮದ್, ಶಾಲಾ ಸಂಚಾಲಕ ಬಸ್ತಿವಾಮನ ಶೆಣೈ, ಸೇಂಟ್ ಅಲೋಶಿಯಸ್ ಕಾಲೇಜಿನ ರೆ. ಫಾದರ್ ಡಿ.ವಾಝ್, ಅಹ್ಮದ್ ಹಾಜಿ ಅವರ ಪತ್ನಿ ಬಿಫಾತುಮಾ ಅಹ್ಮದ್ ಹಾಜಿ, ಪುತ್ರರಾದ ಅಬ್ದುಲ್ ಸಲಾಂ, ಮುಹಮ್ಮದ್ ಅಶ್ರಫ್, ಪುತ್ರಿ ಮರಿಯಂ ಶಬಾನಾ ಫೈಝಲ್, ಫೈಝಲ್, ಝಕರಿಯಾ, ಅಕ್ರಂ ಮೊಯ್ದೀನ್, ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಉಪಸ್ಥಿತರಿದ್ದರು. ಎಸ್‌ಎಂಆರ್ ಸಂಸ್ಥೆಯ ಎಸ್‌ಎಂ ರಶೀದ್ ಹಾಜಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರ ಗಣ್ಯರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಮರಿಯಂ ಶಬಾನಾ ಫೈಝಲ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಾದ ಮುಹಮ್ಮದ್ ಉಸ್ಮಾನ್ ಐಮಾನ್ ಹಾಗೂ ಶ್ರವ್ಯಾ ಆರ್ ಅವರು ಹುಟ್ಟುಹಬ್ಬ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ತುಂಬೆ ಜುಮಾ ಮಸೀದಿಯ ಖತೀಬ್ ಅಬ್ದುಲ್ ಲತೀಫ್ ಅವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಿ.ಎ. ಗ್ರೂಪ್‌ನ ಸ್ಥಾಪಕಾಧ್ಯಕ್ಷ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಸ್ವಾಗತಿಸಿದರು. ಸೋಫಿಯಾ ಫೈಝಲ್ ಅವರು ಪುಸ್ತಕದ ಕಿರುಪರಿಚಯವಿತ್ತರು. ಹಾಜಿ ಅವರ ಪುತ್ರಿ ಮರಿಯಂ ಶಬಾನಾ ಫೈಝಲ್ ವಂದಿಸಿದರು. ಶಿಕ್ಷಕಿ ನೀತಾಶ್ರೀ ನಿರೂಪಿಸಿದರು. ಕಚೇರಿ ಅಧೀಕ್ಷಕ ಕಬೀರ್ ಸಹಕರಿಸಿದರು.
ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ