ಯಕ್ಷಗಾನ

ಪದ್ಯಾಣ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಸಾಲಿನಪದ್ಯಾಣ ಪ್ರಶಸ್ತಿಘೋಷಣೆಯಾಗಿದೆ ಎಂದು ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2019 ಡಿ.15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಅವರಿಗೆ ಪ್ರದಾನಿಸಲಾಗಿತ್ತು.

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿಕಲಾಕೃತಜ್ಞತೆಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ವರ್ಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನದವರು. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಸಂದರ್ಭದಲ್ಲಿಶ್ರೀ ಹನುಮಗಿರಿ ಮೇಳದವರಿಂದಸತ್ಯಾಂತರಂಗ ಪ್ರಸಂಗದ ಬಯಲಾಟ ಜರುಗಲಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts