ಕಂಬಳಕ್ಕೆ ಶಕ್ತಿ ತುಂಬಲು ಹಾಗೂ ಆರ್ಥಿಕ ನೆರವು ನೀಡಲು ಬದ್ಧ ಎಂದು ಉಪಮುಖ್ಯಮಂತ್ರಿ ಡಾ.ಆಶ್ವಥ ನಾರಾಯಣ ಹೇಳಿದ್ದಾರೆ.
ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಸಮಾರೋಪ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಅವರು ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರು ಅತಿಥಿಯಾಗಿದ್ದರು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಮಾಜಿ ಸಚಿವ ನಾಗರಾಜ ಶೆಟ್ಟಿ,ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಮೊದಲಾದವರಿದ್ದರು. ಈ ಸಂದರ್ಭ ಕಂಬಳದ ಸ್ಥಳದಾನಿಗಳನ್ನು ಗೌರವಿಸಲಾಯಿತು. ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಹಾಗೂ ಪದಾಧಿಕಾರಿಗಳು ಉಪಸ್ಥತಿತರಿದ್ದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127