ಬಂಟ್ವಾಳ

ರಾಯಿಯಲ್ಲಿ 2 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಚಾಲನೆ

ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ಶಾಸಕರ ಅನುದಾನದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ಕಾರ್ಯಕ್ರಮ ಶನಿವಾರ ರಾಯಿ, ಕೊಯ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯಿತು.

ರಾಜೇಶ್ ನಾಯ್ಕ್ ಚಾಲನೆ ನೀಡಿದರು.

ದೈಲಾ-ಲಕ್ಷ್ಮೀಕೋಡಿ ರಸ್ತೆ: ಶಾಸಕರ  ಅನುದಾನದ 1.53 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೈಲಾ-ಲಕ್ಷ್ಮೀಕೋಡಿವರೆಗಿನ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಇಲ್ಲಿನ ತೆಂಕಾಯಿಬೊಟ್ಟುವಿನಲ್ಲಿ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಗುದ್ದಲಿ ಪೂಜೆ ನೆರವೇರಿಸಿದರು. ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ಅವರು ಧಾರ್ಮಿಕವಿಽ ವಿಧಾನ ನಡೆಸಿದರು.

ಜಾಹೀರಾತು

ಬಳಿಕ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಬಂಟ್ವಾಳ ಉಪವಿಭಾಗದಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ  ಕಾರ್ಯ ನಡೆಯುತ್ತಿವೆ. ಸುಮಾರು 1.53 ಕೋಟಿ ವೆಚ್ಚದಲ್ಲಿ ಒಂದು ಬಾರಿ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೈಲಾ-ಲಕ್ಷ್ಮೀಕೋಡಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಈ ರಸ್ತೆಯು ಸಂಪೂರ್ಣ ಕಾಂಕ್ರೀಟ್ ರಸ್ತೆಯಾಗಿದ್ದು, ಎರಡು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಕೊಯ್ಲ ಗ್ರಾಮದ ಕೊಲಗುತ್ತುವಿನಿಂದ ಅಮ್ಯಾಲ ವರೆಗಿನ (ಪರಿಶಿಷ್ಟ ಜಾತಿ) ಕಾಂಕ್ರಿಟ್ ರಸ್ತೆ ಕಾಮಗಾರಿ ಹಾಗೂ ರಾಯಿ ಗ್ರಾಮದ ಮಾನಡ್ಕದಿಂದ ರಾಮೇರಿ ಪರಿಶಿಷ್ಟ ಪಂಗಡ ಕಾಲನಿಗೆ 10 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ರಾಯಿ ಗ್ರಾಮದ ರಾಯಿ ಬಜಲೋಡಿ ರಸ್ತೆ ಕಾಮಗಾರಿ, 10 ಲಕ್ಷ ರೂ. ನೀರಳಿಕೆ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನಡೆದಿದೆ ಎಂದು ಮಾಹಿತಿ ನೀಡಿದರು.

ಉದ್ಘಾಟನೆ: ಇದಕ್ಕೂ ಮುನ್ನ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕೊಲ ಗ್ರಾಮದ ಮಡಂದೂರು ಕಾಂಕ್ರೀಟ್ ರಸ್ತೆ ಮತ್ತು 10 ಲಕ್ಷ ರೂ. ವೆಚ್ಚದ  ಮಾವಂತೂರುನಿಂದ ಲೂಜಕೋಡಿ ಸಂಪರ್ಕ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ರಾಯಿ ಗ್ರಾ.ಪಂ. ಅಧ್ಯಕ್ಷ  ದಯಾನಂದ ಸಪಲ್ಯ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಹರೀಶ್ ರಾಯಿ, ರಾಘವ ಅಮೀನ್, ಪದ್ಮನಾಭ ಗೌಡ, ಪ್ರಮುಖರಾದ ಎಂ.ಪಿ.ದಿನೇಶ್, ವಿಶ್ವನಾಥ ಗೌಡ, ಸಂತೋಷ್ ರಾಯಿಬೆಟ್ಟು, ವಸಂತ ಗೌಡ, ಪರಮೇಶ್ವರ ಪೂಜಾರಿ, ಕೃಷ್ಣ ಭಟ್, ಸಂತೋಷ್ ಗೌಡ, ಚಂದ್ರಶೇಖರ ಗೌಡ ಮತ್ತಾವು,  ಸುಂದರ ಪೂಜಾರಿ, ಚಂದ್ರಶೇಖರ ಗೌಡ, ಇಂದಿರಾ, ಮಧುಕರ ಬಂಗೇರ,  ರಮಾನಾಥ ರಾಯಿ, ರಾಜೇಶ್ ಶೆಟ್ಟಿ ಶೀತಲ, ಸದಾನಂದ ಗೌಡ ಮತ್ತಾವು, ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಷಣ್ಮುಗಂ, ಕಿರಿಯ ಅಭಿಯಂತರ ಅರುಣ್ ಪ್ರಕಾಶ್, ಗುತ್ತಿದಾರರಾದ ಎಚ್. ಅಬ್ದುಲ್ ಖಾದರ್, ಽರಜ್ ಮತ್ತಿತರರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ