ಪೌರತ್ವ ತಿದ್ದುಪಡಿ ಮಸೂದೆ ಕೇಂದ್ರ ಸಂಪುಟ ಸಭೆಯ ಅನುಮೋದನೆಗೆ ಆಕ್ಷೇಪ ವ್ಯಕ್ತಪಡಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ಸೋಮವಾರ ಸಂಜೆ ಪ್ರತಿಭಟನಾ ಸಭೆ ನಡೆಯಿತು.

ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮುಖ್ಯಭಾಷಣ ಮಾಡಿದರು.
ಎಸ್ಡಿಪಿಐ ಕ್ಷೇತ್ರ ಕಾರ್ಯದರ್ಶಿ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್., ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ. ಮತ್ತಿತರರು ಹಾಜರಿದ್ದರು. ಸಮಿತಿ ಸದಸ್ಯ ಮಾಲಿಕ್ ಕೊಳಕೆ ಸ್ವಾಗತಿಸಿ, ವಂದಿಸಿದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127


Be the first to comment on "ಪೌರತ್ವ ತಿದ್ದುಪಡಿ ಮಸೂದೆಗೆ ಎಸ್.ಡಿ.ಪಿ.ಐ. ಆಕ್ಷೇಪ – ಪ್ರತಿಭಟನಾ ಸಭೆ"