ಕಲ್ಲಡ್ಕ

ಮಜಿ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ, ಶತಮಾನೋತ್ಸವಕ್ಕೆ ಲಾಂಛನ ಅನಾವರಣ

ಎಂ.ಆರ್.ಪಿ.ಎಲ್ ಮಂಗಳೂರು ಮತ್ತು ಮಾತಾ ಡೆವಲಪರ್ಸ್ ಪ್ರೈ. ಲಿ. ಸುರತ್ಕಲ್ ಸಹಯೋಗದಲ್ಲಿ ನಿರ್ಮಿಸಲಾಗುವ 10 ಕೊಠಡಿ ಮತ್ತು ಸಭಾಂಗಣ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಶಾಲಾ 99ನೇ ವಾರ್ಷಿಕೋತ್ಗವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಜಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಶಾಲಾಭಿವೃದ್ಧಿಯಲ್ಲಿ ಪೂರಕವಾಗಿ ತೊಡಗಿಸಿಕೊಂಡಾಗ ವಿದ್ಯಾದೇಗುಲ ಅಭಿವೃದ್ಧಿಗೊಳ್ಳುವುದರಲ್ಲಿ ಸಂಶವಯಿಲ್ಲ ಎಂದರು.

ಶಾಲೆ ದತ್ತು ಸ್ವೀಕರಿಸಿದ ಮಾತಾ ಡೆವಲಪರ್ಸ್ ಪ್ರೈ. ಲಿ. ಮುಖ್ಯಸ್ಥ ಹಾಗೂ ಹಳೇ ವಿದ್ಯಾರ್ಥಿ ಸಂತೋಷ್ ಶೆಟ್ಟಿ ಅರೆಬೆಟ್ಟು ಶಾಲೆಯ ಅಭಿವೃದ್ಧಿಯ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಶಾಲಾ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಲಾಂಛನ  ಅನಾವರಣಗೊಳಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯೆ ಮಂಜುಳಾ ಮಾಧವ ಮಾವೆ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸದಸ್ಯೆ ಗೀತಾ ಚಂದ್ರಶೇಖರ್, ವೀರಕಂಭ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ವಿ.ಕೆ.ಅಬ್ಬಾಸ್, ಸದಸ್ಯರಾದ ಜಯಂತಿ ಜನಾರ್ದನ, ಪದ್ಮಾವತಿ, ಜಯಂತಿ, ಜನಾರ್ದನ ಪೂಜಾರಿ, ರಾಮಚಂದ್ರ ಪ್ರಭು, ಗಣ್ಯರಾದ ಎಂ.ತಿರುಮಲ ಕುಮಾರ್ ಮಜಿ, ಈಶ್ವರ ಭಟ್ ನಗ್ರಿಮೂಲೆ, ಎನ್. ದಿಲೀಪ್ ಕುಮಾರ್ ಎಂ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ, ವಿಶ್ವನಾಥ ಎಂ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಹರೀಶ ಮಾಂಬಾಡಿ, ನಿವೃತ್ತ ಮುಖ್ಯ ಶಿಕ್ಷಕ ವಿಠಲ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ,ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ರಮೇಶ ಗೌಡ, ವಿದ್ಯಾರ್ಥಿ ನಾಯಕ ಉದಿತ್ ರಾಜ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎನ್.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹರಿಣಾಕ್ಷಿ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಹಳೇ ವಿದ್ಯಾರ್ಥಿ ಚಿನ್ನ ಮೈರ ಸಹಕರಿಸಿದರು.

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ