ಬಂಟ್ವಾಳ ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಜಿ.ಆನಂದ (70) ಇನ್ನಿಲ್ಲ. ಮಂಗಳವಾರ ಬೆಳಗ್ಗೆ ಸುಮಾರು 1.30ಕ್ಕೆ ಅವರು ನಿಧನ ಹೊಂದಿದರು.
ಜಾಹೀರಾತು
ಬಂಟ್ವಾಳ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ವೀಣಾದಾರಿಣಿ ಕಲಾ ಯುವಕ ಸಂಘ, ಸ್ಟೇಟ್ ಟೈಲರ್ ಅಸೋಸಿಯೇಶನ್, ಸ್ಥಳೀಯ ಕಲ್ಲುರ್ಟಿ ಸನ್ನಿಧಿ ಸಹಿತ ಹಲವು ಸಂಘ, ಸಂಸ್ಥೆಗಳಲ್ಲಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಜೆಪಿ ಮುಖಂಡ ಜಿ.ಆನಂದ ಇನ್ನಿಲ್ಲ"