ಬಂಟ್ವಾಳ

ಶಂಭೂರು ಹೈಸ್ಕೂಲ್ ನಲ್ಲಿ 21ರಂದು ವಾರ್ಷಿಕೋತ್ಸವ, ಸೌರಶಕ್ತಿ ಘಟಕ ಲೋಕಾರ್ಪಣೆ

ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ, ಸರಕಾರಿ ಪ್ರೌಢಶಾಲೆಯಲ್ಲಿ ಡಿ.21ರಂದು ಶನಿವಾರ ಶಾಲಾ ವಾರ್ಷಿಕೋತ್ಸವ ನಡೆಯಲಿದೆ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.

ಜಾಹೀರಾತು

ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬೆಳಗ್ಗೆ ೯.೩೦ಕ್ಕೆ  ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಸಂಜೆ ೭.೩೦ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಎಂ.ಆರ್.ಪಿ.ಎಲ್. ಸಿ.ಎಸ್.ಆರ್.ನಿಧಿಯಿಂದ ಕೊಡಲಾದ ಸೋಲಾರ್ ಘಟಕವನ್ನು ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.

ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ವಿಶೇಷ ವಿತ್ತ ವಲಯ ಪ್ರಬಂಧಕ ಡಾ. ರಾಘವೇಂದ್ರ ಹೊಳ್ಳ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ಗೌರವ ಸ್ವೀಕರಿಸುವರು.

ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಗ್ರಾಪಂ ಸದಸ್ಯರಾದ ವಿಶಾಲಾಕ್ಷಿ, ಜಯರಾಜ್, ಗೀತಾ, ಸೇವಾಂಜಲಿ ಪ್ರತಿಷ್ಠಾನ ಪ್ರಮುಖರಾದ ಕೃಷ್ಣಕುಮಾರ್ ಪೂಂಜಾ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಜೇಸಿ ನಿಯೋಜಿತ ಅಧ್ಯಕ್ಷ ಶ್ರೀನಿಧಿ ಭಟ್, ಶಂಭೂರು ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಆನಂದ ಸಾಲ್ಯಾನ್, ನರಿಕೊಂಬು ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿ ಅಂಚನ್, ಉದ್ಯಮಿ ಪದ್ಮನಾಭ ಮಯ್ಯ, ಶೇಡಿಗುರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಭೋಗನಾಥ ಪೂಜಾರಿ, ಶೇಡಿಗುರಿ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ಶಾಲಿನಿ, ಹಿರಿಯ ವಿದ್ಯಾರ್ಥಿಗಳ ಸಂಘ ಕಾರ್ಯದರ್ಶಿ ರಮೇಶ್ ಭಾಗವಹಿಸುವರು.

ಸಂಜೆ ನಡೆಯುವ ವಾರ್ಷಿಕೋತ್ಸವದಲ್ಲಿ ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್. ನಿಧಿಯಿಂದ ಕೊಡಲಾದ ಸೋಲಾರ್ ಘಟಕವನ್ನು ಶಾಲೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರ್ಪಿಸಲಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿಪಂ ಸದಸ್ಯೆ ಕಮಲಾಕ್ಷಿ .ಕೆ ಪೂಜಾರಿ, ತಾಪಂ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರಾಧಿಕಾರಿ ರಾಜಶೇಖರ ಪುರಾಣಿಕ್,  ಸಾ.ಶಿ.ಇ. ಆಡಳಿತ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಉದ್ಯಮಿ ಕರುಣಾಕರನ್, ಎಂ.ಆರ್.ಪಿ.ಎಲ್. ಜನರಲ್ ಮ್ಯಾನೇಜರ್ ಸುಬ್ರಾಯ ಭಟ್, ಚೀಫ್ ಮ್ಯಾನೇಜರ್ ವೀಣಾ ಟಿ.ಶೆಟ್ಟಿ, ಇನೆರ್ಜಿಯಾ ಸೋಲಾರ್ ಕನ್ಸಲ್ಟೆಂಟ್ ಮಾಧವ ಭಂಡಾರಿ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಧೀರಜ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಯಗೊವಿಂದ, ೨೦೧೮-೧೯ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಸರಕಾರಿ ಪ್ರೌಢಶಾಲೆಗಲಲ್ಲಿ ಅತೀ ಹೆಚ್ಚು ಅಂಕ ಪಡೆದ ಶಾಲಾ ವಿದ್ಯಾರ್ಥಿ ಜಯಗೋವಿಂದ ಅವರನ್ನು ಅಭಿನಂದಿಸಲಾಗುವುದು, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದೆಂದು ಕಾರ್ಯಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.