
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಖ್ಯಾತ ಸಾಹಿತಿ, ಸಂಘಟಕ ಡಾ. ನಾ.ಮೊಗಸಾಲೆ ಅವರಿಗೆ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಗಿರೀಶ ಭಟ್ಟ ಅಜಕ್ಕಳ ಅಧ್ಯಕ್ಷತೆ ವಹಿಸುವರು. ನೀರ್ಪಾಜೆ ಸಂಸ್ಮರಣೆ ಮತ್ತು ಪ್ರಶಸ್ತಿ ಪುರಸ್ಕೃತರ ಅಭಿನಂದನೆಯನ್ನು ಉಪನ್ಯಾಸಕಿ ಗೀತಾ ಕೋಂಕೋಡಿ ಮಾಡುವರು. ಅತಿಥಿಗಳಾಗಿ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಭಾಗವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ವತಿಯಿಂದ ಕಾರ್ಯಕ್ರಮ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಸುದರ್ಶನ ಜೈನ್, ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127


Be the first to comment on "21ರಂದು ಡಾ. ನಾ. ಮೊಗಸಾಲೆ ಅವರಿಗೆ ನೀರ್ಪಾಜೆ ಪ್ರಶಸ್ತಿ ಪ್ರದಾನ"