ತಾಲೂಕಿನ ಹಲವು ಕಡೆಗಳಲ್ಲಿ ಗ್ರಾಮ ಪಂಚಾಯತ್ ಮಿಲನ ಕಾರ್ಯಕ್ರಮವನ್ನು ಏರ್ಪಡಿಸಿ, ಕಾರ್ಯಕರ್ತರ ಬಲವರ್ಧನೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾನುವಾರ ಸಂಜೆ ಪುರಸಭೆ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶವನ್ನು ನಡೆಸಿತು.
ಪುರಸಭಾ ಮಿಲನ ಎಂಬ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಪಕ್ಷದ ಒಗ್ಗಟ್ಟು ಹಾಗೂ ಬೆಳವಣಿಗೆಗೆ ಕಾರ್ಯಕರ್ತರ ಶ್ರಮ, ಕೊಡುಗೆ ಗಮನಾರ್ಹ ಎಂದರು. ಇದೇ ವೇಳೆ ಪುರಸಭಾ ಸದಸ್ಯರನ್ನು ಸನ್ಮಾನಿಸಲಾಯಿತು.
ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಮತ್ತು ಪದ್ಮಶೇಖರ್ ಜೈನ್, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಪಿಯುಸ್ ಎಲ್. ರೊಡ್ರಿಗಸ್, ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಜಗದೀಶ್ ಕೊಯಿಲ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…