ಬಂಟ್ವಾಳ

ಕೇಂದ್ರ ಸರಕಾರದಿಂದ ದೇಶ ವಿಭಜಕ ನೀತಿ: ಕಾಂಗ್ರೆಸ್ ನಾಯಕ ಸುಧೀರ್ ಕುಮಾರ್ ಮುರೊಳ್ಳಿ

ಬಂಟ್ವಾಳದಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ

ದೇಶದಲ್ಲಿ ತುಂಬಿರುವ ಅರಾಜಕತೆ, ಹತ್ಯೆ, ಅತ್ಯಾಚಾರ, ಹಣದುಬ್ಬರಗಳಂತ ಜ್ವಲಂತ ಸಮಸ್ಯೆಗಳಿಂದ ಜನರ ದಿಕ್ಕು ತಪ್ಪಿಸಲು ನರೇಂದ್ರ ಮೋದಿ ಮತ್ತು ಅಮಿತ್ ಶಾ ಪೌರತ್ವ ನಿಷೇಧ ಕಾಯ್ದೆಯನ್ನು ತಂದಿದ್ದು, ಜಾತಿ ಧರ್ಮಗಳ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಕಾರ್ಯ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಜಾಹೀರಾತು

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಬೆಳಗ್ಗೆ ಬಿ.ಸಿ.ರೋಡಿನ ಫ್ಲೈಓವರ್ ಬಳಿ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಆರೆಸ್ಸೆಸ್ ಸಹಿತ ಸಂಘ ಪರಿವಾರದವರ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಒಟ್ಟಾಗಿ ಬದುಕಬೇಕು ಎಂಬ ಚಿಂತನೆಯನ್ನು ರಾಷ್ಟ್ರ ಮಾಡುತ್ತಿದ್ದರೆ, ಅದ‌ನ್ನು ಒಡೆಯುವ ಕೆಲಸವನ್ನು ಕೇಂದ್ರ ಮಾಡುತ್ತಿದೆ. ಒಡೆದು ಆಳುತ್ತಿರುವ ನೀತಿಯನ್ನು ಬ್ರಿಟಿಷರ ನೀತಿ ಮುಂದುವರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ದೊಡ್ಡ ಸಮುದಾಯವನ್ನು ಹೊರಗಿಡುವ ಮೂಲಕ ಒಡೆಯುವ ಕಾರ್ಯ ನಡೆಸುತ್ತಿದೆ. ಆರ್ಥಿಕ ಹಿಂಜರಿತ ಮುಚ್ಚಲು ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದರು.

ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಸಮರ್ಥಿಸಿದ ಅವರು, ಸಾವರ್ಕರ್ ಶಬ್ದದ ಹಿಂದೆ ಗೋಡ್ಸೆ ಇದ್ದಾರೆ. ನಾವು ನೈಜ ರಾಮ ಭಕ್ತರು ಎಂದು ವಿರೋಧಿಗಳನ್ನು ಟೀಕಿಸಿದರು.ಮುಸಲ್ಮಾನರ ಸಂಖ್ಯೆ ಶೇ.30ರಷ್ಟಿಲ್ಲ ಎಂದು ವಾದಿಸಿದ ಸುಧೀರ್ ಕುಮಾರ್, ಕಾಂಗ್ರೆಸ್ ಪಕ್ಷ ಭಾರತವನ್ನು ಸ್ವಾವಲಂಬಿಯನ್ನಾಗಿಸಿದರೆ, ಕೇಂದ್ರ ಆಮದು ಮಾಡುವ ಕಾರ್ಯ ನಡೆಸುತ್ತಿದೆ. ವಲಸೆ ಎನ್ನುವುದು ಭಾರತೀಯ ಸಂಸ್ಕೃತಿ ಎಂದರು.

ಸಾಮರಸ್ಯಕ್ಕೆ ಧಕ್ಕೆ: ರೈ

ಇದಕ್ಕೂ ಮೊದಲು ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಪೌರತ್ವ ನಿಷೇಧ ಕಾಯ್ದೆಯಿಂದ ದೇಶದ ಸಾಮರಸ್ಯಕ್ಕೆ ಧಕ್ಕೆ ತರಲಾಗಿದೆ ಎಂದರು. ಜಾತ್ಯಾತೀತರನ್ನು ಅವಹೇಳನ ಮಾಡುವ ಕಾರ್ಯ ನೋವು ತರುತ್ತದೆ. ಮನುಷ್ಯ ಪ್ರೀತಿ ಮಾಡುವವರನ್ನು ಅಪಮಾನ ಮಾಡಲಾಗುತ್ತಿದೆ. ಅತ್ಯಾಚಾರ ನಡೆಯುವುದರ ಕುರಿತು ಬಿಜೆಪಿ ತಲೆಕೆಡಿಸಿಕೊಳ್ಳುತ್ತಿಲ್ಲ. ರಾಹುಲ್ ಹೇಳಿಕೆಗೆ ಟೀಕೆ ಮಾಡಲಾಗುತ್ತಿದೆ. ದೇಶದಲ್ಲಿ ಮತೀಯವಾದ ಮುಂದಿಟ್ಟು ಆಡಳಿತ ನಡೆಸುವುದು ಒಳ್ಳೆಯ ಲಕ್ಷಣವಲ್ಲ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ಶರೀಫ್, ಸಿದ್ದೀಕ್ ಗುಡ್ಡೆಯಂಗಡಿ, ಗಂಗಾಧರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಪಕ್ಷ ಪ್ರಮುಖರಾದ ಸದಾಶಿವ ಬಂಗೇರ, ಯೂಸುಫ್ ಕರಂದಾಡಿ, ಮಹಮ್ಮದ್ ನಂದಾವರ, ಸಿದ್ಧೀಕ್ ಸರವು, ವೆಂಕಪ್ಪ ಪೂಜಾರಿ, ಪರಮೇಶ್ವರ ಎಂ, ಧನಲಕ್ಷ್ಮೀ ಬಂಗೇರ, ಡೆನ್ಝಿಲ್ ನೊರೊನ್ಹಾ ಮೊದಲಾದವರು ಉಪಸ್ಥಿತರಿದ್ದರು.

www.bantwalnews.com 

Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts