ಕಲ್ಲಡ್ಕ

ಮಾಣಿ ಸಮೀಪ ಅಪಘಾತ: ಐವರು ಗಾಯ, ಓರ್ವ ಗಂಭೀರ

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪ ಮಂಗಳವಾರ ತಡರಾತ್ರಿ ನಡೆದಿದೆ.


ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರರಾದ ಝುಬೈರ್, ಶರೀಫ್, ಸಿರಾಜ್, ವಳವೂರಿನ ಅರಬನಗುಡ್ಡೆಯ ನಿವಾಸಿ, ಹಮೀದ್ ಎಂಬವರ ಪುತ್ರರಾದ ಮುಸ್ತಫಾ, ಆಸಿಫ್ ಗಾಯಗೊಂಡವರು. ಇವರಲ್ಲಿ ಸಿರಾಜ್ ಗಂಭೀರ ಗಾಯಗೊಂಡಿದ್ದಾರೆ.
ಇವರೆಲ್ಲರು ಎಸ್ಕೆಎಸ್ಸೆಸ್ಸೆಫ್ ತಲಪಾಡಿ ಘಟಕದ ಕಾರ್ಯಕರ್ತರಾಗಿದ್ದು, ಸಮಸ್ತ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ಮಂಗಳವಾರ ಮಡಿಕೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ರಾತ್ರಿ ಹಿಂದಿರುಗುವ ವೇಳೆ ಮಾಣಿ ಸಮೀಪದ ಕೊಡಾಜೆ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಇಲ್ಲಿನ ಮೈಲುಗಲ್ಲುವೊಂದಕ್ಕೆ ಢಿಕ್ಕಿ ಹೊಡೆದು, ಉರುಳಿದೆ. ಅಪಘಾತದ ತೀವ್ರತೆಗೆ ಸಿರಾಜ್ ಎಂಬವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರಾದ ಝುಬೈರ್, ಸಿರಾಜ್, ಮುಸ್ತಫಾ, ಆಸಿಫ್ ಗಾಯಗೊಂಡಿದ್ದು, ಇವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago