ಕಲ್ಲಡ್ಕ

ಕಲ್ಲಡ್ಕದ ಸರ್ಕಾರಿ ಮಾದರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ‌ ಸರ್ಕಾರ ಪ್ರಯತ್ನಿಸುತ್ತಿದ್ದು, ಪೋಷಕರೂ ಈ ಬಗ್ಗೆ ಗಮನಹರಿಸಬೇಕೆಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.

ಜಾಹೀರಾತು

ಕಲ್ಲಡ್ಕದ ಸರ್ಕಾರಿ ಮಾದರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಮತ್ರು ಪ್ರತಿಭಾ ಪುರಸ್ಕಾರ ಉತ್ಸವ-2019 ಅನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ತೊಡಗಿಸಿಕೊಂಡಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದವರು ಹೇಳಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ವರ ಸಹಕಾರ ಕೋರಿದರು.

ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ, ಮಕ್ಕಳು ಸೃಜನಶೀಲತೆಯನ್ನು ಮೈಗೂಡಿಸಿಕೊಂಡು ಬೆಳೆಯುವಲ್ಲಿ ಸೂಕ್ತ ವಾತಾವರಣ ನಿರ್ಮಾಣದ ಜವಬ್ದಾರಿ ಪ್ರಜ್ಞಾವಂತ ಸಮಾಜದ್ದು ಎಂದರು.  ಸುರತ್ಕಲ್ ಮಾತಾ ಡೆವಲಪರ್ಸ್  ಸಂಸ್ಥೆಯ ಎಂ.ಡಿ. ಸಂತೋಷ್ ಶೆಟ್ಟಿ ಅರೆಬೆಟ್ಟು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳ ಜೊತೆಗೆ ಹೆಚ್ಚು ಆಕರ್ಷಣೀಯ ಗೊಳಿಸುವುದರ ಮೂಲಕ  ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಆಗಬೇಕಿದೆ ಎಂದರು.

ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ್ ಕೆ‌ ಯವರು ಮಾತನಾಡಿ, ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು,ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯೆ ಆಯಿಷಾ,  ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಉಪಾಧ್ಯಕ್ಷ ಅಬೂಬಕರ್, ಶಿವಶಂಕರ್, ಸಂಘಟನಾ ಕಾರ್ಯದರ್ಶಿ ಸಲೀಂ, ಸಾಂಸ್ಕೃತಿಕ ಕಾರ್ಯದರ್ಶಿ ಚಿ.ರಮೇಶ್ ಕಲ್ಲಡ್ಕ, ಶಾಲಾ ನಾಯಕ ಈಶನ್,  ಹಿರಿಯ ವಿದ್ಯಾರ್ಥಿ ಶಿವರಾಮ ಹೊಳ್ಳ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಯತಿನ್ ಕುಮಾರ್, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.   ಶಾಲೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ  ಕಸ್ತೂರಿ.ಪಿ, ಗಾಯತ್ರಿದೇವಿ, ರೇಷ್ಮಾಲೂಯಿಸ್, ಲವೀನಾಪ್ರಮೀಳಾ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯಶಿಕ್ಷಕ  ಅಬೂಬಕರ್ ಅಶ್ರಫ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ವಾರಿಜಾಕ್ಷಿ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಆಯಿಷತ್ ಶಫಾನಾ,ಫಾತಿಮಾ ಇಸ್ಮಾ, ಆಯಿಷತ್ ಸಫೀನಾ ಕಾರ್ಯಕ್ರ‌ಮ ನಿರೂಪಿಸಿದರು. ಶಿಕ್ಷಕಿ ಸಂಗೀತಾ ಸಹಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago