ಬಂಟ್ವಾಳ ಬಿಇಒ ಕಚೇರಿ ಸಭಾಂಗಣದಲ್ಲಿ ಡಿ.21ರಂದು ಆಯೋಜಿಸಲ್ಪಟ್ಟಿದ್ದ ಹಿರಿಯ ಸಾಹಿತಿ ಡಾ. ನಾ.ಮೊಗಸಾಲೆ ಅವರಿಗೆ ಕನ್ನಡ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.೪ಕ್ಕೆ ಮುಂದೂಡಲಾಗಿದೆ. ಮಧ್ಯಾಹ್ನ 2.30ಕ್ಕೆ ಅದೇ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…