ಬಂಟ್ವಾಳ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಡಿ.21ರಂದು ನಿಗದಿಯಾಗಿದ್ದು, ಸೆ.144 ಹಿನ್ನೆಲೆಯಲ್ಲಿ ಡಿ.24ರಂದು ಮುಂದೂಡಲಾಗಿದೆ. ವಾರ್ಷಿಕೋತ್ಸವಕ್ಕೆ ಆಗಮಿಸುವ ಹಳೇ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಈ ಬದಲಾವಣೆಯನ್ನು ಗಮನಿಸಬೇಕಾಗಿ ಬೊಂಡಾಲ ಜಗನ್ನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.